ಮಂಗಳೂರು,ಡಿ.30: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆಯ ಫಲಿತಾಂಶದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವ ರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜಗನ್ನಾಥರಾವ್ ಜೋಷಿ ಸೌಧದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಭೆ ಜರುಗಿತು. ಈ ಸಭೆಯಲ್ಲಿ ಎಲ್ಲಾ ಕಾರ್ಯಕರ್ತರು ಮತ್ತು ಮತದಾರರಿಗೆ ಕೋಟ ಶ್ರೀನಿವಾಸ ಪೂಜಾರಿಯವರು ಅಭಿನಂದನೆ ಸಲ್ಲಿಸಿದರು.
ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್‌ಸಿಂಹ ನಾಯಕ್, ಜಿಲ್ಲಾ ಪ್ರಭಾರಿ ಲಾಲಾಜಿ ಮೆಂಡನ್, ವಿಧಾನ ಪರಿಷತ್ ಸದಸ್ಯ ಕ್ಯಾ|ಗಣೇಶ್ ಕಾರ್ಣಿಕ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಮಾಜಿ ವಿ.ಪ.ಸದಸ್ಯ ಕೆ.ಮೋನಪ್ಪ ಭಂಡಾರಿ, ರಾಜ್ಯ ಕಾರ್ಯದರ್ಶಿ ಶ್ಯಾಮಲಾ ಕುಂದರ್, ಮಾಜಿ ಶಾಸಕ ಎನ್.ಯೋಗೀಶ್ ಭಟ್, ಜಿಲ್ಲಾ ಉಪಾಧ್ಯಕ್ಷ ಉಮಾನಾಥ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.