ಮಂಗಳೂರು, ಡಿ.31: ಮಂಗಳೂರು ಪೊಲೀಸ್ ಆಯುಕ್ತ ಎಸ್.ಮುರುಗನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅವರ ಸ್ಥಾನಕ್ಕೆ ಬೆಂಗಳೂರಿನಲ್ಲಿ ಜಂಟಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಅವರನ್ನು ನಿಯುಕ್ತಿ ಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಎಸ್.ಮುರುಗನ್ ಅವರು 2015ರ ಜನವರಿಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಮುರುಗನ್ ಎಲ್ಲಿಗೆ ವರ್ಗಾವಣೆಗೊಂಡಿದ್ದಾರೆ ಎಂದು ಖಚಿತವಾಗಿಲ್ಲ.