ಕನ್ನಡ ವಾರ್ತೆಗಳು

ಜ.08: ಉಚಿತ ದಂತ ತಪಾಸಣಾ ಶಿಬಿರ

Pinterest LinkedIn Tumblr

Wenlock_hosptl_photo_1

ಮಂಗಳೂರು,ಜ.05 : ದ.ಕ. ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯೆನೆಪೊಯ ದಂತ ಕಾಲೇಜು ದೇರಳಕಟ್ಟೆ ಮತ್ತು ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಜ.8ರಂದು ಉಚಿತ ದಂತ ತಪಾಸಣಾ ಶಿಬಿರವು ನಗರದ ವೆನ್ಲಾಕ್ ಆಸ್ಪತ್ರೆಯ ದಂತ ವಿಭಾಗದಲ್ಲಿ ನಡೆಯಲಿದೆ ಎಂದು ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Wenlock_hosptl_photo_2 Wenlock_hosptl_photo_3

ಈ ದಂತಭಾಗ್ಯ ಯೋಜನೆಯನ್ವಯ 60 ವರ್ಷದ ಮೇಲ್ಪಟ್ಟ ಬಿಪಿಎಲ್ ವರ್ಗಕ್ಕೆ ಸೇರಿದ ಹಿರಿಯ ನಾಗರಿಕರಿಗೆ ಉಚಿತ ದಂತಪಂಕ್ತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈ ಸಂಧರ್ಭದಲ್ಲಿ ಹೇಳಿದರು.

ಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ, ಡಾ. ಗಣೇಶ್ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

Write A Comment