ಕನ್ನಡ ವಾರ್ತೆಗಳು

ಸ್ಕಾರ್ಪಿಯೋ ಕಾರು ಪಲ್ಟಿ : ಕಾರಿನಲ್ಲಿದ್ದ ಎಂಟು ಮಂದಿ ಪವಾಡ ಸದೃಷ್ಯ ಪಾರು

Pinterest LinkedIn Tumblr

Scorpio_Car_Palty_1

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ಕಾರೊಂದು ನಗರದ ಕೊಟ್ಟಾರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಬುಧವಾರ ನಡೆದಿದ್ದು, ಕಾರಿನಲ್ಲಿದ್ದ ಎಲ್ಲರೂ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ

ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪಲ್ಟಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಅವಶೇಷಗಳು ಅಲ್ಲಲ್ಲಿ ಚದುರಿ ಬಿದ್ದಿದೆ.

Scorpio_Car_Palty_2

ಕಾರಿನಲ್ಲಿದ್ದ 8 ಮಂದಿಯಲ್ಲಿ ಆರು ಮಂದಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅವರನ್ನು ನಗರದ ಖಾಸಗಿ ಅಸ್ಪತ್ರೆಗೆ ದಾಖಲಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳು ಉಡುಪಿ ಮತ್ತು ಪಡುಬಿದ್ರೆ ನಿವಾಸಿಗಳಾಗಿದ್ದು ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಮನೆಗೆ ವಾಪಸಾಗುತ್ತಿದ್ದರು ಎಂದು ತಿಳಿದುಬಂದಿದೆ.

ಮಹೇಂದ್ರ ಸ್ಕಾರ್ಪಿಯೋ ಕಾರು ಪಲ್ಟಿಯಾದ ರಭಸಕ್ಕೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ರೆನಾಲ್ಟ್ ಡಸ್ಟರ್ ಕಾರಿಗೂ ಡಿಕ್ಕಿ ಹೊಡೆದಿದ್ದು, ಡಸ್ಟರ್ ಕಾರಿಗೂ ಹಾನಿಯುಂಟಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಮಂಗಳೂರು ಪೂರ್ವ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Write A Comment