ಮಂಗಳೂರು, ಜನವರಿ.17 : ಆರೋಗ್ಯ ದೃಷ್ಟಿಯಿಂದ ಪೋಲಿಯೊ ಬಹಳ ಮಹತ್ವವನ್ನು ಪಡೆದಿದ್ದು, ಪ್ರತಿಯೋಬ್ಬರು ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಹಾಕಿಸುವ ಮೂಲಕ ಮಕ್ಕಳ ಆರೋಗ್ಯ ಕಾಪಾಡ ಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಅವರು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ ಅಶ್ರಯದಲ್ಲಿ ರವಿವಾರ ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪೋಲಿಯೊ ನಿರ್ಮಾಣಕ್ಕಾಗಿ ಸರಕಾರ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದು, ಇದೀಗ ನಮ್ಮ ರಾಷ್ಟ್ರ ಪೋಲಿಯೊ ಮುಕ್ತವಾಗಿರುವುದು ನಮಗೆಲ್ಲಾ ಹೆಮ್ಮೆಯ ವಿಷಯ ಎಂದು ರೈ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಹಾಜಾರಿದ್ದ ಮಕ್ಕಳಿಗೆ ಅತಿಥಿಗಳು ಪೋಲಿಯೋ ಡ್ರಾಪ್ಸ್ ಹಾಕಿ ಪೋಲಿಯೋ ಬಗ್ಗೆ ಎಚ್ಚರಿಕೆ ವಹಿಸುವಂತೆ ಮತ್ತು ಡ್ರಾಪ್ಸ್ ಹಾಕುವುದರಿಂದ ಉಂಟಾಗುವ ಆರೋಗ್ಯದ ಬಗೆಗಿನ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಮೇಯರ್ ಜೆಸಿಂತಾ ವಿಜಯ ಆಲ್ಫ್ರೆಡ್, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಜಿ.ಪಂ.ಸಿಇಒ ಶ್ರೀ ವಿದ್ಯಾ, ಮನಪಾ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಬಿ.ಪ್ರಕಾಶ್ ಸಾಲಿಯಾನ್, ಅಯುಷ್ ಆಸ್ಪತ್ರೆಯ ಜಿಲ್ಲಾ ವೈಧ್ಯಾಧಿಕಾರಿ ಡಾ.ದೇವದಾಸ್ ಹಾಗೂ ಮತ್ತಿತ್ತರ ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.