ಕನ್ನಡ ವಾರ್ತೆಗಳು

ಜ.23: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ.

Pinterest LinkedIn Tumblr

congrs_press_meet_1

ಮಂಗಳೂರು,ಜ.20: ಜಿ.ಪಂ, ತಾ.ಪಂ. ಚುನಾವಣಾ ಸಿದ್ದತೆಗಾಗಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಜ. 23ರಂದು  ಕುಲಶೇಖರ ಕಾರ್ಡೆಲ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ ಎಂದು ದ.ಕ ಜಿಲ್ಲಾ ಕಾಂಗ್ರೆಸ್ ಹಂಗಾಮಿ ಜಿಲ್ಲಾಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಹೇಳಿದರು.

congrs_press_meet_2

ಅವರು ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಈ ಸಮಾವೇಶದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ, ಗೃಹಸಚಿವ ಪರಮೇಶ್ವರ್, ಮಾಜಿ ಕೇಂದ್ರ ಸಚಿವ ಆಸ್ಕರ್ ಪೆರ್ನಾಂಡಿಸ್, ಗ್ರಾಮೀಣಾಭಿವೃದ್ದಿ ಸಚಿವ ಹೆಚ್.ಕೆ.ಪಾಟೀಲ್, ಚುನಾವಣಾ ವೀಕ್ಷಕ ಸುದರ್ಶನ್, ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಯು.ಟಿ.ಖಾದರ್, ಅಭಯಚಂದ್ರ ಜೈನ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Write A Comment