
(File Photo) ಮಂಗಳೂರು, ಜ.21: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದ ಗೂಡಂಗಡಿಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿ ಅಲ್ಲಿ ದಾಸ್ತಾನಿರಿಸಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ತಣ್ಣೀರುಬಾವಿ ಜಿಎಂಆರ್ ಬಳಿಯಲ್ಲಿರುವ ಹಿಲ್ಡಾ ಡಿ’ಸೋಜಾ ಎಂಬಾಕೆಯ ಗೂಡಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂದ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ಅಲ್ಲಿಗೆ ದಾಳಿ ನಡೆಸಿ ಪರಿಶೀಲಿಸಿದಾಗ ಮಾರಾಟಕ್ಕಾಗಿ ಇಟ್ಟುಕೊಂಡಿದ್ದ ಸುಮಾರು 5000 ರೂ. ಮೌಲ್ಯದ ಮದ್ಯ ಪತ್ತೆಯಾಗಿದೆ. ಮದ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಹಿಲ್ಡಾ ಡಿ’ಸೋಜಾಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.