ಕುಂದಾಪುರ: ಕಾರೊಂದು ಸೈಕಲಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಧಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಬೀಜಾಡಿ ನಿವಾಸಿ ಲೋಕನಾಥ(57) ಅಪಘಾತದಲ್ಲಿ ಸಾವನ್ನಪ್ಪಿದವರು.
ಘಟನೆ ವಿವರ: ಗೋಪಾಡಿಯ ದೇವಸ್ಥಾನವೊಂದರಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಘೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಕುಂದಾಪುರ ಕಡೆಯಿಂದ ವೇಗವಾಗಿ ಬಂದ ಕಾರು ಸೈಕಲ್ ಗೆ ಡಿಕ್ಕಿಹೊಡೆದಿದೆ. ಪರಿಣಾಮ ಸೈಕಲ್ ಸವಾರರಗಿದ್ದ ಲೋಕನಾಥ್ ರಸ್ತೆಗೆ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಲೋಕನಾಥ ಅವರು ದಲಿತ ಸಂಘರ್ಷ ಸಮಿತಿಯಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದರು.
ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.