ಕನ್ನಡ ವಾರ್ತೆಗಳು

ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ – ಕಾರ್ಯಕರ್ತರಿಗೆ ಅಭಿನಂದನೆ.

Pinterest LinkedIn Tumblr

congres_samavesha_1

ಮಂಗಳೂರು,ಜ.23 : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ದ.ಕ. ವಿಧಾನ ಪರಿಷತ್‌ಗೆ ನಡೆದ ಸ್ಥಳೀಯಾಡಳಿತ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಪ್ರತಾಪ್ ಚಂದ್ರ ಶೆಟ್ಟಿ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಶನಿವಾರ ನಗರದ ಕುಲಶೇಖರ ಕೋರ್ಡೆಲ್ ಚರ್ಚ್ ಸಭಾಭವನದಲ್ಲಿ ಜರಗಿತು.

ಕಾರ್ಯಕರ್ತರ ಸಮಾವೇಶ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಆಸ್ಕರ್ ಪೆರ್ನಾಂಡಿಸ್ ಅವರು, ರಾಜ್ಯದಲ್ಲಿ ಸಾಕಷ್ಟು ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಉಡುಪಿ ಹಾಗೂ ದ.ಕ. ಜಿಲ್ಲೆಯ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸುವ ಮೂಲಕ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಿದೆ. ಇದರ ಜತೆಯಲ್ಲೇ ಸರಕಾರ ಜಾರಿಗೆ ತಂದ ಜನಪರ ಯೋಜನೆಗಳು ಕೂಡಾ ನೆರವಾಗಿದೆ ಎಂದರು.

congres_samavesha_2 congres_samavesha_3 congres_samavesha_4 congres_samavesha_5 congres_samavesha_6 congres_samavesha_7

ಇ ಸ್ವತ್ತಿನಿಂದ ವಿನಾಯಿತಿ: ಮನೆ, ವಸತಿ ನಿವೇಶನಗಳ ಖರೀದಿ ಮಾರಾಟದ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ಗಳಿಂದ ನಮೂನೆ 9 ಮತ್ತು 11ಅನ್ನು ಕಡ್ಡಾಯವಾಗಿ ಪಡೆಯಬೇಕಾದ ಇ ಸ್ವತ್ತು ನಿಯಮಗಳ ವ್ಯಾಪ್ತಿಯಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ವಿನಾಯಿತಿ ನೀಡಿರುವುದಾಗಿ ಅವರು ಹೇಳಿದರು.

ಕಾಂಗ್ರೆಸ್‌ನ ದ.ಕ.ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ ಸ್ವಾಗತಿಸಿದರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಸಚಿವರಾದ ಯು.ಟಿ.ಖಾದರ್, ಅಭಯಚಂದ್ರ ಜೈನ್, ಶಾಸಕರಾದ ಜೆ.ಆರ್.ಲೋಬೋ, ವಸಂತ ಬಂಗೇರ, ವಿಧಾನಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಯುತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಮೇಯರ್ ಕೆ.ಅಶ್ರಫ್, ಕಾಂಗ್ರೆಸ್ ಮುಖಂಡರುಗಳಾದ ವಿ.ಸುದರ್ಶನ್, ಜಿ.ಎ.ಬಾವ, ಎಂ.ಎ.ಗಫೂರ್, ಮಮತಾಗೆ ಗಟ್ಟಿ, ಕಾಂಗ್ರೆಸಿನ ಹಿರಿಯ ಮುಖಂಡರು, ಮನಪಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Write A Comment