ಮಂಗಳೂರು :ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ಅಮಿತ್ ಶಾ ಅವರು ಪುನರಾಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ದ.ಕ.ಜಿಲ್ಲಾ ವತಿಯಿಂದ ರವಿವಾರ ನಗರದ ಜಿಲ್ಲಾ ಬಿಜೆಪಿ ಕಛೇರಿ ಮುಂಭಾಗದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ರವಿಶಂಕರ್ ಮಿಜಾರು, ಕಾರ್ಪೊರೇಟರ್ ಗಳಾದ ಪ್ರೇಮಾನಂದ ಶೆಟ್ಟಿ, ರಾಜೇಂದ್ರ, ಪಕ್ಷದ ಪ್ರಮುಖರಾದ ಸಂಜಯ್ ಪ್ರಭು, ಕ್ಯಾಪ್ಟನ್ ಬೃಜೇಶ್ ಚೌಟ, ಗುರುಚರಣ್, ಸುಜಿತ್ ಪ್ರತಾಪ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.