ಕನ್ನಡ ವಾರ್ತೆಗಳು

ಮಂಗಳೂರು : ನಾಳೆಯಿಂದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ

Pinterest LinkedIn Tumblr

Police_Comisnr_new_1

ಮಂಗಳೂರು, ಜ.31: ಈಗಾಗಲೇ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಕಾನೂನು ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಫೆ.1ರಿಂದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಕಾನೂನು ಜಾರಿಗೆ ಬರಲಿದೆ ಎಂದು ಮಂಗಳೂರು ನಗರ ಪೊಲೀಸ್ ಅಯುಕ್ತರ್ ಎಂ.ಚಂದ್ರಶೇಖರ್ ತಿಳಿಸಿದ್ದಾರೆ.

ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಈಗಾಗಲೇ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಕಾನೂನು ಜಾರಿಯಾಗಿದೆ. ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಉಳಿದ ಕಡೆಗಳಲ್ಲಿ ಸೋಮವಾರದಿಂದ ಈ ಕಾನೂನು ಜಾರಿಗೆ ಬರಲಿದೆ ಎಂದು ಕಮಿಷನರ್ ಹೇಳಿದ್ದಾರೆ.

180 ಪೊಲೀಸ್ ಅಧಿಕಾರಿಗಳು ಸಹಿತ ಸಿಬ್ಬಂದಿಗಳ ನೇಮಕಾತಿ :

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ 180 ಪೊಲೀಸ್ ಅಧಿಕಾರಿಗಳು ಸಹಿತ ಸಿಬ್ಬಂದಿಯ ನೇಮಕಾತಿ ನಡೆದಿದೆ. ಅವರನ್ನು ಈಗಾಗಲೆ ಧಾರವಾಡ ಮತ್ತು ಬೆಂಗಳೂರಿನಲ್ಲಿ ತರಬೇತಿಗೆ ನಿಯೋಜಿಸಲಾಗಿದೆ. ಮುಂದಿನ ಆರು ತಿಂಗಳ ಬಳಿಕ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.

ಮಂಗಳೂರು ಪೊಲೀಸ್ ಕಮೀಶನರೇಟ್ ವ್ಯಾಪ್ತಿಯಲ್ಲಿ ಒಟ್ಟು 1,789 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,002 ಹುದ್ದೆಗಳಿಗೆ ಮಾತ್ರ ನೇಮಕಾತಿ ನಡೆದಿದೆ. ಉಳಿದಂತೆ ಪ್ರಸಕ್ತ 180 ಹುದ್ದೆಗಳಿಗೆ ನೇಮಕಾತಿಯಾಗಿದ್ದರೂ ಇನ್ನೂ 607 ಹುದ್ದೆಗಳಿಗೆ ನೇಮಕಾತಿ ಆಗಬೇಕಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.

Write A Comment