ಮಂಗಳೂರು,ಫೆ.02: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶ್ರೀ ಎಸ್.ಪ್ರದೀಪ ಕುಮಾರ್ ಕಲ್ಕೂರ ಅವರು ಅವಿರೋಧ ಅಯ್ಕೆಯಾಗಿದ್ದಾರೆ.
ನಾಮಪತ್ರ ಹಿಂದೆಗೆಯಲು ಕೊನೆಯ ದಿವಾದ ಸೋಮವಾರ ದೇವಪ್ರಸಾದ್ ಪುನರೂರು ಹಾಗೂ ಕೆ.ಮೋಹನ್ ರಾವ್ ನಾಮಪತ್ರ ವಾಪಸ್ ಪಡೆದಿದ್ದು, ಚುನಾವಣಾ ಕಣದಲ್ಲಿ ಪ್ರದೀಪ್ ಕುಮಾರ್ ಕಲ್ಕೂರ ಮಾತ್ರ ಉಳಿದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರದೀಪ ಕುಮಾರ್ ಕಲ್ಕೂರ ಅವರು ಪುನಾರಾಯ್ಕೆ ಖಚಿತಗೊಂಡಿತ್ತು.
ಶ್ರೀ ಎಸ್.ಪ್ರದೀಪ ಕುಮಾರ್ ಕಲ್ಕೂರ ಅವರು 5 ನೇ ಬಾರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಚುನಾವಣಾ ಸಮಿತಿಯಿಂದ ಸೂಚನೆ ಬಂದ ಬಳಿಕ ಅಧಿಕೃತ ಘೋಷಣೆಯಾಗಲಿದೆ.