ಕನ್ನಡ ವಾರ್ತೆಗಳು

`ಇನ್ವೆಸ್ಟ್ ಕರ್ನಾಟಕ’ ವಿಶೇಷ ಪ್ರಾಧಿಕಾರ ರಚಿಸಲು ಮನವಿ

Pinterest LinkedIn Tumblr

invest_ment_prjct

ಬೆಂಗಳೂರು, ಫೆ. 05:  `ಇನ್ವೆಸ್ಟ್ ಕರ್ನಾಟಕ’ ಹೂಡಿಕೆದಾರರ ಸಮಾವೇಶದಲ್ಲಾಗಿರುವ ಒಡಂಬಡಿಕೆಗಳ ಅನುಷ್ಠಾನಕ್ಕೆ ವಿಶೇಷ ಪ್ರಾಧಿಕಾರ ರಚನೆ ಮಾಡಬೇಕೆಂದು ಬಿಜೆಪಿ ಮುಖಂಡ, ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ, ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ `ಮೇಕ್ ಇನ್ ಇಂಡಿಯಾ’ ಯೋಜನೆಯ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂ. ಬಂಡವಾಳ ಹೂಡಲು ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಉದ್ಯಮಿಗಳ ಜತೆಗಿನ ಒಪ್ಪಂದಗಳ ಅನುಷ್ಠಾನಕ್ಕೆ ವಿಶೇಷ ಒತ್ತು ನೀಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉದ್ಯಮಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ, ಭೂಮಿ, ವಿದ್ಯುತ್ ಒದಗಿಸುವ ಮೂಲಕ ಕರ್ನಾಟಕ ಉದ್ಯಮಸ್ನೇಹಿ ಎಂಬುದನ್ನು ಮನದಟ್ಟು ಮಾಡಿಕೊಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ

Write A Comment