ಉಡುಪಿ: ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಖಾಸಗಿ ವೇಗದೂತ ಬಸ್ಸೊಂದು ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ಸಮೀಪದ ಹೇರೂರು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಹೇರೂರು ನಿವಾಸಿ ಪೆದ್ರು ಸುವರ್ಣ(65) ಅಪಘಾತದಲ್ಲಿ ಸಾವನ್ನಪ್ಪಿದವರು.

ಘಟನೆ ವಿವರ: ಖಾಸಗಿ ಬಸ್ಸು ಕುಂದಾಪುರ ಕಡೆಯಿಂದ ಉಡುಪಿಯತ್ತ ವೇಗವಾಗಿ ತೆರಳುತಿದ್ದು ಈ ವೇಳೆ ಮನೆಯಿಂದ ಪೇಟೆಗೆಂದು ಬಂದ ಪೆದ್ರು ಸುವರ್ಣ ರಸ್ತೆ ದಾಟುತ್ತಿದ್ದ ವೇಳೆ ಬಸ್ಸು ಡಿಕ್ಕಿಯಾಗಿದೆ. ಈ ಪರಿಣಾಮ ಪೆದ್ರು ಅವರು ಡಿವೈಡರಿಗೆ ಬಡಿದಿದ್ದು ತಲೆ ಹಾಗೂ ದೇಹದ ಭಾಗಗಳಿಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.