ಮಂಗಳೂರು,ಫೆ 18: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಜಿ.ಪಂ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮಾಜಿ ಸಚಿವ ಕೃಷ್ಣ.ಜೆ.ಪಾಲೆಮಾರ್ ಅವರು ಬುಧವಾರ ಅಡ್ಯಾರ್ ಹಾಗೂ ಗುರುಪುರ, ಕೈಕಂಬ ಪರಿಸರದಲ್ಲಿ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡಿದರು.
ಇದೇ ಸಂದರ್ಭದಲ್ಲಿ ಗುರುಪುರ ಬ್ಲಾಕ್ ವತಿಯಿಂದ ಗುರುಪುರ ಪರಿಸರದಲ್ಲಿ ಹಮ್ಮಿಕೊಳ್ಳಲಾದ ಪ್ರಚಾರ ಜಾಥದಲ್ಲಿ ಪಾಲೆಮಾರ್ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಹಾಗೂ ಪಕ್ಷದ ಪ್ರಮುಖರಾದ ಉಮಾನಾಥ ಕೋಟ್ಯಾನ್, ಜಗದೀಶ್ ಶೇಣವ, ಸೂರಜ್ ಕಲ್ಯಾ ಮತ್ತಿತ್ತರರು ಉಪಸ್ಥಿತರಿದ್ದರು. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.