
ಮಂಗಳೂರು,ಫೆ.18 : ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿ ಸಂಘದ ಸದಸ್ಯರು ಸ್ನೇಹ ದೀಪ ಹುಡುಗಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳೊಂದಿಗೆ ಅವರನ್ನು ರಂಜಿಸಿದರು.
ಬೆಸೆಂಟ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಕಾರ್ಮೆಲೀಟಾ ಗೋವಿಯಸ್ ರವರು, ಹಳೇ ವಿದ್ಯಾರ್ಥಿ ಸಂಘದ ಮತ್ತು ವಿದ್ಯಾರ್ಥಿ ಸಂಘ ಸಮಾಜ ಮುಖಿ ಕಾರ್ಯಕ್ರಮವನ್ನು ತುಂಬಾ ಶ್ಲಾಘಿಸಿದರು. ಇಂತಹ ಕಾರ್ಯಕ್ರಮಗಳು ಇನ್ನಷ್ಟು ಮೂಡಿ ಬರಲಿ ಎಂದು ಶುಭ ಹಾರೈಸಿದರು.

ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸಂಗ್ರಹಿಸಿದ ಜೀನಸು ಹಾಗೂ ತಿಂಡಿ ತಿನಿಸುಗಳನ್ನು ಸ್ನೇಹ ದೀಪದ ಅಧ್ಯಕ್ಷರು ತಬಸಮ್ ಇವರಿಗೆ ಹಸ್ತಾಂತರಿಸಿದರು.
ಹಳೇ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪ್ರೊ. ಈಶ್ವರ್ ಪೂಜಾರಿ, ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸುನೀಲ್ ಕುಮಾರ್ ಮತ್ತು ಸದಸ್ಯರು ಉಪಸ್ಥಿತರಿದ್ದರು.