ಕನ್ನಡ ವಾರ್ತೆಗಳು

ಚುನಾವಣೆ ಹಿನ್ನೆಲೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ

Pinterest LinkedIn Tumblr

liquor_ban_pic

ಮ೦ಗಳೂರು ಫೆ.19: ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಫೆ. 20 ರಂದು ಮತದಾನ ಹಾಗೂ 23 ರಂದು ಮತ ಎಣಿಕೆ ಕಾರ್ಯವು ನಡೆಯಲಿದ್ದು, ಫೆ. 19  ರ ಬೆಳಿಗ್ಗೆ 7ಗಂಟೆಯಿಂದ ಫೆ.20 ರ ಮಧ್ಯರಾತ್ರಿಯವರೆಗೆ ಹಾಗೂ ಫೆ. 22ರ ರಾತ್ರಿ 10 ಗಂಟೆಯಿಂದ ಫೆ.23 ರ ಮಧ್ಯರಾತ್ರಿಯವರೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನೊಳಗೊಂಡಂತೆ ಪೂರ್ಣ ಜಿಲ್ಲಾ ವ್ಯಾಪ್ತಿಗೆ ಪಾನ ವಿರೋಧ ದಿನವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಎ.ಬಿ. ಇಬ್ರಾಹಿಂ ಆದೇಶಿಸಿದ್ದಾರೆ.

ಈ ದಿನಗಳಲ್ಲಿ ಮಧ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮಧ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚಲು ಆದೇಶಿಸಿರುತ್ತಾರೆ.

Write A Comment