ಮಂಗಳೂರು : ಮಂಗಳೂರು ತಾಲೂಕು ಪಂಚಾಯತ್ ಚುನಾವಣೆಯ ಮತ ಏಣಿಕೆ ಕಾರ್ಯ ಪೂರ್ಣಗೊಂಡಿದ್ದು, ಜಿದ್ದಾಜಿದ್ಧಿನ ಈ ಹೋರಾಟದಲ್ಲಿ ಒಂದು ಸ್ಥಾನದ ಅಂತರದಲ್ಲಿ ಕಾಂಗ್ರೆಸ್ ಪಕ್ಷ ತಾಲೂಕು ಪಂಚಾಯತ್ ಚುಕ್ಕಣಿ ಹಿಡಿದಿದೆ.
ಒಟ್ಟು 39 ಕ್ಷೇತ್ರಗಳಿಗೆ ನಡೆದ ತಾಲೂಕು ಪಂಚಾಯತ್ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆಯೇರಿದೆ. ಆದರೆ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಒಂದು ಸ್ಥಾನದ ಕೊರತೆಯಿಂದ ಸೋಲುಂಡಿದೆ.
ಪುತ್ತೂರು ತಾಲೂಕು ಪಂಚಾಯತ್ ಬಿಜೆಪಿ ತೆಕ್ಕೆಗೆ :
ಪುತ್ತೂರು ತಾಲೂಕು ಪಂಚಾಯತ್ ಚುನಾವಣೆಯ ಮತ ಏಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಒಟ್ಟು 24 ಕ್ಷೇತ್ರಗಳಿಗೆ ನಡೆದ ಈ ಚುನಾವಣೆಯಲ್ಲಿ ಬಿಜೆಪಿ 16 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರುವ ಮೂಲಕ ಪುತ್ತೂರು ತಾಲೂಕು ಪಂಚಾಯತ್‌ನ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್ ಬರೀ 8 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವ ಮೂಲಕ ಪುತ್ತೂರು ತಾಲೂಕು ಪಂಚಾಯತ್‌ನ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ.
ಉಳಿದಂತೆ ಬಂಟ್ವಾಳ ತಾಲೂಕ್ ಪಂಚಾಯತ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಹೆಚ್ಚಿನ ವಿವರ ನಿರೀಕ್ಷಿಸಿ…