ಕನ್ನಡ ವಾರ್ತೆಗಳು

ಪುಂಜಾಲ್ ಕಟ್ಟೆ : ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

Pinterest LinkedIn Tumblr

ಮಂಗಳೂರು : ಬಂಟ್ವಾಳ ತಾಲೂಕಿನ ಪುಂಜಾಲ್ ಕಟ್ಟೆ ಠಾಣಾ ವ್ಯಾಪ್ತಿಯ ಮೂರ್ಜೆ ಬಳಿಯ ದೈಕಿನ ಕಟ್ಟೆ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತ ವಿಕ್ಟರ್ ಡಿ’ಸೋಜ ಎಂಬವರಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಇಲ್ಲಿನ ಮತ ಏಣಿಕೆ ಕೇಂದ್ರದಲ್ಲಿ ಮತ ಏಣಿಕೆ ಕಾರ್ಯ ಮುಗಿದ ಬಳಿಕ ಬಿಜೆಪಿ ಜಿ.ಪಂ. ಅಭ್ಯರ್ಥಿ ತುಂಗಪ್ಪ ಬಂಗೇರ ಅವರ ವಿಜಯದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದ ಸಂದರ್ಭ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ವಿಕ್ಟರ್ ಡಿ’ಸೋಜ ಎಂಬವರಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. .

ಪರಿಸರದಲ್ಲಿ ಸ್ವಲ್ಪ ಹೊತ್ತು ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಇಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದು ಬಂದಿದೆ.

Write A Comment