ಮಂಗಳೂರು, ಫೆ. 24: ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜ ಶ್ರೀ ಶ್ರೀ ಯೋಗಿ ನಿರ್ಮಲ್ ನಾಥ್‌ಜೀ ಯವರ ನ್ನೊಳಗೊಂಡ ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ `ನವನಾಥ್ ಝುಂಡಿ’ ಫೆ. 26 ರಂದು ಶುಕ್ರವಾರ ಬೆಳಿಗ್ಗೆ 7ಕ್ಕೆ ಕೊಟ್ಟಾರ ಚೌಕಿಯಲ್ಲಿ ಪುರಪ್ರವೇಶವಾಗಲಿದೆ.
ಕೊಟ್ಟಾರದಲ್ಲಿ `ನವನಾಥ್ ಝಂಡಿ’ಯನ್ನು ಸಂಪ್ರದಾಯಿಕವಾಗಿ ಸ್ವಾಗತಿಸಲಾಗುವುದು. ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಆಗಮಿಸುವ ಝಂಡಿ ಕೊಟ್ಟಾರದಿಂದ ಮಂಗಳೂರು ಪುರಪ್ರವೇಶವಾಗಲಿದೆ.
ಕೊಟ್ಟಾರದಿಂದ ಉರ್ವಸ್ಟೋರ್, ಲೇಡಿಹಿಲ್, ಕುದ್ರೋಳಿ, ರಥಬೀದಿ, ಹಂಪನಕಟ್ಟ, ಪಿ.ವಿ.ಎಸ್, ಬಂಟ್ಸ್ ಹಾಸ್ಟೆಲ್, ಮಲ್ಲಿಕಟ್ಟೆ, ಕದ್ರಿ ಮಂಜುನಾಥ ದೇವಸ್ಥಾನಕ್ಕಾಗಿ ಕದಳಿ ಮಠಕ್ಕೆ ತಲುಪಲಿದೆ. ಝುಂಡಿಯಲ್ಲಿ 2 ವೈದ್ಯ, 3 ಇಂಜಿನಿಯರ್, 19 ಸ್ನಾತಕೋತ್ತರ ಪದವೀದರ ಸನ್ಯಾಸಿಗಳಿದ್ದಾರೆ, ಅಲ್ಲದೆ ಹಠಯೋಗಿಗಳು ಸೇರಿದಂತೆ ಸುಮಾರು 500ಕ್ಕೂ ಅಧಿಕ ಸಾಧುಗಳು ಝಂಡಿಯಲ್ಲಿದ್ದಾರೆ. ಯೋಗಿ ರಾಜೇಂದ್ರನಾಥ್ ಕಳೆದ ೧೫ ವರ್ಷಗಳಿಂದ ನಿಂತುಕೊಂಡೇ ಹಠಯೋಗ ನಿರತರಾಗಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಝುಂಡಿಯನ್ನು ಸ್ವಾಗತಿಸುವಂತೆ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜ ಪಟ್ಟಾಭಿಷೇಕ ಮಹೋತ್ಸವ ಸಮಿತಿ ಅಧ್ಯಕ್ಷ ಹೆಚ್. ಕೆ. ಪುರುಷೋತ್ತಮ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.