ಕನ್ನಡ ವಾರ್ತೆಗಳು

ಪತ್ರಕರ್ತನ ಮೇಲಿನ ಹಲ್ಲೆಗೆ ಖಂಡನೆ : ಜಿಲ್ಲಾಧಿಕಾರಿಯಿಂದ ಪತ್ರಕರ್ತರ ಸುರಕ್ಷೆಯ ಭರವಸೆ

Pinterest LinkedIn Tumblr

Journalist_Protest_2a

ಮಂಗಳೂರು : ಉಪ್ಪಿನಂಗಡಿಯಲ್ಲಿ ಪತ್ರಕರ್ತ ಆಸೀಫ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ದ.ಕ.ಜಿಲ್ಲಾಧಿಕಾರಿ ಕಛೆರಿ ಮುಂಭಾಗ ಪ್ರತಿಭಟನೆ ನಡೆಯಿತು.

ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಪತ್ರಕರ್ತರು ಭಯಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಬೇಕು ಎಂದು ಈ ಸಂದರ್ಭದಲ್ಲಿ ಪ್ರತಿಭಟನಕಾರರು ಆಗ್ರಹಿಸಿದರು.

Journalist_Protest_1a

ಜಿಲ್ಲಾಧಿಕಾರಿಯಿಂದ ಪತ್ರಕರ್ತರ ಸುರಕ್ಷೆಯ ಭರವಸೆ :

ಬಳಿಕ ಪತ್ರಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ನಿಯೋಗವು ದ.ಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು, ಪತ್ರಕರ್ತರ ಸುರಕ್ಷಾ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡುತ್ತೇನೆ ಎಂದು ಪತ್ರಕರ್ತರಿಗೆ ಭರವಸೆ ನೀಡಿದರು.

ಮಾಧ್ಯಮದವರು ಭಯಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಬೇಕು ಎಂದು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.

ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಂಘದ ಉಪಾಧ್ಯಕ್ಷ ಸುಖೇಶ್, ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ಪಿ.ಬಿ. ಹರೀಶ್ ರೈ, ಮುಹಮ್ಮದ್ ಆರೀಫ್, ಪುಷ್ಪರಾಜ್ ಬಿ.ಎನ್, ಜಿತೇಂದ್ರ ಕುಂದೇಶ್ವರ, ತಾರಾನಾಥ ಕಾಪಿಕಾಡ್, ಪ್ರಕಾಶ್ ಪಾಂಡೇಶ್ವರ, ಇಬ್ರಾಹಿಂ ಅಡ್ಕಸ್ಥಳ ಮುಂತಾದವರು ಉಪಸ್ಥಿತರಿದ್ದರು.

Write A Comment