ಕನ್ನಡ ವಾರ್ತೆಗಳು

ಮಾ. 11 : ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ

Pinterest LinkedIn Tumblr

Mcc_building_pics

ಮಂಗಳೂರು, ಮಾ.3: ಮಂಗಳೂರು ಮಹಾನಗರಪಾಲಿಕೆಯ 18ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಮಾ. 11 ರಂದು ಬೆಳಿಗ್ಗೆ 11.30ಕ್ಕೆ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸದ್ಯಕ್ಕೆ ಪ್ರಸಕ್ತ ಸಾಲಿನ ಮೇಯರ್ ಗಾದಿಯು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ, ಉಪ ಮೇಯರ್ ಸ್ಥಾನವು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿತ್ತು. ಪ್ರಸಕ್ತ ಅವಧಿಯಲ್ಲಿ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಕಾರಣ ಮೇಯರ್ ಆಗಿ ಕಾಂಗ್ರೆಸ್‌ನ ಜೆಸಿಂತಾ ವಿಜಯಾ ಆಲ್ಪ್ರೆಡ್ ಹಾಗೂ ಉಪ ಮೇಯರ್ ಆಗಿ ಪುರುಷೋತ್ತಮ ಚಿತ್ರಾಪುರ ಆಯ್ಕೆಯಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಅವಧಿಯು ಮಾ. 11ರಂದು ಕೊನೆಗೊಳ್ಳಲಿದೆ.

ಆದರೆ ಈ ಬಾರಿ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪ ಮೇಯರ್ ಪ.ಪಂ. ಮಹಿಳೆಗೆ ಮೀಸಲಾಗಿದೆ. 60 ಸದಸ್ಯರಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ 35, ಬಿಜೆಪಿ 20, ಜೆಡಿಎಸ್ 2, ಸಿಪಿಎಂ, ಎಸ್‌ಡಿಪಿಐ ಹಾಗೂ ಪಕ್ಷೇತರ ತಲಾ ಒಬ್ಬರು ಸದಸ್ಯರನ್ನು ಹೊಂದಿದೆ.

ಉಪಮೇಯರ್ ಸ್ಥಾನ ಬಿಜೆಪಿಗೆ..!

ಮುಂದಿನ ಮೇಯರ್ ಗಾದಿಯು ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಅಧಿಕ ಸಂಖ್ಯೆಯನ್ನು ಹೊಂದಿರುವ ಕಾಂಗ್ರೆಸ್‌ನ 35 ಸದಸ್ಯರು ಕೂಡಾ ಮೇಯರ್ ಸ್ಥಾನಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಆದರೆ ಉಪಮೇಯರ್ ಸ್ಥಾನ ಪರಿಶಿಷ್ಟ ಪಂಗಡ ಮಹಿಳಾ ವರ್ಗಕ್ಕೆ ಮೀಸಲಾಗಿರುವುದರಿಂದ ಕಾಂಗ್ರೆಸ್ ಪಕ್ಷದಲ್ಲಿ ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಯಾರೂ ಇಲ್ಲ. ಹಾಗಾಗಿ ಈ ಬಾರಿ ಉಪಮೇಯರ್ ಸ್ಥಾನ ಬಿಜೆಪಿಗೆ ಅನಾಯಾಸವಾಗಿ ದೊರೆಯುವುದು ಖಾತ್ರಿಯಾಗಿದೆ. ಬಿಜೆಪಿ ಸದಸ್ಯೆ ಸುಮಿತ್ರಾ ಕರಿಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ.

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯರೊಳಗೆ ತೀವ್ರ ಸ್ಪರ್ಧೆ..

ಪ್ರಸಕ್ತ ಸಾಲಿನ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಕಾಂಗ್ರೆಸ್ ಸದಸ್ಯರೊಳಗೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಪಾಲಿಎಯ ಹಿರಿಯ ಸದಸ್ಯರಾಗಿರುವ ಹರಿನಾಥ್, ಯುವ ಸದಸ್ಯರಾದ ನವೀನ್ ಡಿಸೋಜಾ, ದೀಪಕ್ ಪೂಜಾರಿ, ಭಾಸ್ಕರ್ ಮೊಯ್ಲಿ, ಅಬ್ದುಲ್ ರವೂಫ್ ಹೆಸರು ಸದ್ಯ ಮುಂಚೂಣಿಯಲ್ಲಿದ್ದು, ಪಕ್ಷ ಯಾರ ಹೆಸರನ್ನು ಅಂತಿಮಗೊಳಿಸಲಿದೆ ಎಂಬ ಕುತೂಹಲ ಏರ್ಪಟ್ಟಿದೆ.

Write A Comment