ಕನ್ನಡ ವಾರ್ತೆಗಳು

ಬಾಂಬ್ ಬೆದರಿಕೆ ಕರೆ ಹಿನ್ನೆಲೆ : ಮಂಗಳೂರು- ಕಣ್ಣೂರು ನಡುವೆ ರೈಲು ಸಂಚಾರ ಅಸ್ತವ್ಯಸ್ತ

Pinterest LinkedIn Tumblr

train

ಕಾಸರಗೋಡು, ಮಾ.3: ಕಳ್ನಾಡ್-ತಳಂಗರೆ ರೈಲ್ವೆ ಹಳಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಬುಧವಾರ ರಾತ್ರಿ ಕಾಸರಗೋಡು ಪೊಲೀಸ್ ಠಾಣೆಗೆ ಅನಾಮಿಕ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಮಂಗಳೂರು- ಕಣ್ಣೂರು ನಡುವೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ.

ಬಾಂಬ್ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ಪೊಲೀಸರು ರೈಲು ಹಳಿ ಮತ್ತು ನಿಲ್ದಾಣ ಮೊದಲಾದೆಡೆಗಳಲ್ಲಿ ತಪಾಸಣೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು- ಕಣ್ಣೂರು ನಡುವೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದು, ರೈಲುಗಳನ್ನು ವಿವಿಧ ನಿಲ್ದಾಣಗಳಲ್ಲಿ ನಿಲುಗಡೆಗೊಳಿಸಲಾಗಿದೆ.

ಮಾತ್ರವಲ್ಲದೇ ಬಾಂಬ್ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ಮಂಗಳಾ ಎಕ್ಸ್ ಪ್ರೆಸ್, ಕಾಞಂಗಾಡ್-ಎಗ್ಮೋರ್ ಎಕ್ಸ್‌ಪ್ರೆಸ್, ಕೋಟಿಕುಳಂ-ಕಾಚಿಗುಡ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಕಾಸರಗೋಡು ರೈಲು ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ಆದರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿರುವ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.

Write A Comment