ಕನ್ನಡ ವಾರ್ತೆಗಳು

ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಸದಸ್ಯತನ ಅಭಿಯಾನಕ್ಕೆ ಚಾಲನೆ

Pinterest LinkedIn Tumblr

navaneeth_yaksh_photo

ಮಂಗಳೂರು,ಮಾ.03 : ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್‌ನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮ ಇತ್ತೀಚೆಗೆ ಲಾಲ್ ಭಾಗ್‌ನಲ್ಲಿರುವ ಪತ್‌ಮುಡಿ ಸಭಾಂಗಣದಲ್ಲಿ ಜರಗಿತು. ಪೌಂಡೇಶನ್ ಟ್ರಸ್ಟ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ಕದ್ರಿ ನವನೀತ ಶೆಟ್ಟಿ ಅವರಿಗೆ ಸದಸ್ಯತನದ ಪುಸ್ತಕಗಳನ್ನು ನೀಡುವು ದರೊಂದಿಗೆ ಸದಸ್ಯತನ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಅಶಕ್ತ ಕಲಾವಿದರಿಗೆ ನೆರವು ನೀಡುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್‌ನಿಂದ ಮೇ 15ರಂದು ಭಾನುವಾರ ಮಂಗಳೂರಿನ ಪುರಭವನದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ, ಯಕ್ಷಗಾನ ವೈಭವ, ಯಕ್ಷ ಗಾನ ತಾಳಮದ್ದಳೆ ಹಾಗೂ ಯಕ್ಷ ಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಅಲ್ಲದೆ ಕಲಾವಿದರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ, ಆರೋಗ್ಯ ವಿಮೆ ಸಹಿತ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಅದೇ ದಿನ 15 ಜನ ಅಶಕ್ತ ಕಲಾವಿದರಿಗೆ ತಲಾ 50 ಸಾವಿರ ಸಹಾಯಧನ ಮತ್ತು ಓರ್ವ ಅರ್ಹ ಕಲಾವಿದನಿಗೆ ಒಂದು ಲಕ್ಷ ರೂಪಾಯಿ ನಗದಿನೊಂದಿಗೆ ಪಟ್ಲ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುವುದು ಎಂದು ಟ್ರಸ್ಟ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸಭೆಯಲ್ಲಿ ತಿಳಿಸಿದರು.

ಟ್ರಸ್ಟ್‌ನ ಈ ಎಲ್ಲಾ ಸೇವಾ ಯೋಜನೆಗಳಿಗಾಗಿ ನಿಧಿ ಸಂಚಯನ ಕಾರ್ಯಕ್ರಮವು ನಡೆಯಲಿದೆ.

ಸಭೆಯಲ್ಲಿ ಗೌರವಾಧ್ಯಕ್ಷ ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ಸುಧೀರ್ ಭಟ್ ಎಕ್ಕಾರು, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸುದೇಶ್ ರೈ, ಸಂಘಟನಾ ಕಾರ್ಯದರ್ಶಿಗಳಾದ ಕದ್ರಿ ನವನೀತ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಜತೆ ಕಾರ್ಯದರ್ಶಿ ಉದಯನಂದ ಶೆಟ್ಟಿ, ರಾಜೀವ ಶೆಟ್ಟಿ ಕೈಕಂಬ, ಡಾ. ಬಾಲಚಂದ್ರ ಶೆಟ್ಟಿ, ಗಿರೀಶ್ ಶೆಟ್ಟಿ, ಜಗದೀಶ್ ಶೆಟ್ಟಿ , ಪ್ರಮೋದ್ ಶೆಟ್ಟಿ, ಸತೀಶ್ ಶೆಟ್ಟಿ, ಮಧುಕರ ಅಮೀನ್, ಮೊದಲಾದ ವರು ಉಪಸ್ಥಿತರಿದ್ದರು.

ಟ್ರಸ್ಟ್‌ಗೆ ಸದಸ್ಯರಾಗ ಬಯಸುವವರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ (9845172865) ಅಥವಾ ಕೋಶಾಧಿಕಾರಿ ಸುದೆಶ್ ರೈ (9448627215) ಅವರನ್ನು ಸಂಪಕಿಸಬಹುದಾಗಿದೆ

Write A Comment