ಕನ್ನಡ ವಾರ್ತೆಗಳು

ಯುವಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ ದರೋಡೆ ಪ್ರಕರಣ : ಪ್ರಮುಖ ಆರೋಪಿಯ ಸೆರೆ

Pinterest LinkedIn Tumblr

Jayaprakash_bolur_acused

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗದಿಂದ ಯುವಕನೊಬ್ಬನನ್ನು ಅಪಹರಿಸಿ ಆತನಿಗೆ ಹಲ್ಲೆ ಮಾಡಿ ನಗದು ಹಣ ಹಾಗೂ ಮೊಬೈಲ್ ಫೋನ್ ಗಳನ್ನು ಸುಲಿಗೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೋಳೂರು ಪರಪ್ಪು ನಿವಾಸಿ ಜಯಪ್ರಕಾಶ್ @ ಜೆಪಿ (24) ಎನ್ನಲಾಗಿದೆ.

ದಿನಾಂಕ: 13-02-2016 ರಂದು ಬೆಳಿಗ್ಗೆ ಮಂಗಳೂರು ನಗರದ ನೀರುಮಾರ್ಗ ಕೆಲರಾಯಿ ನಿವಾಸಿ ಅಕ್ಷಯ್ ಎಂಬಾತನನ್ನು ರಿಕ್ಷಾವೊಂದರಲ್ಲಿ ಬಲತ್ಕಾರವಾಗಿ ಅಪಹರಿಸಿಕೊಂಡು ಸುಲ್ತಾನ್ ಭತ್ತೇರಿ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಕ್ರಮ ಬಂಧನದಲ್ಲಿರಿಸಿ ಆತನಿಗೆ ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸಿ ಆತನಲ್ಲಿದ್ದ ನಗದು ಹಣ ಹಾಗೂ ಮೊಬೈಲ್ ಫೋನ್ ಗಳನ್ನು ಸುಲಿಗೆ ಮಾಡಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಪೈಕಿ ಜಯಪ್ರಕಾಶ್ @ ಜೆಪಿ ಎಂಬಾತನು ಈ ಕೃತ್ಯ ನಡೆಸಿದ ನಂತರ ತಲೆಮರೆಸಿಕೊಂಡಿದ್ದನ್ನು.ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶಿರಹಳ್ಳಿ ಎಂಬಲ್ಲಿದ್ದಾನೆಂಬ ಮಾಹಿತಿ ಪಡೆದು ಅಲ್ಲಿಗೆ ಹೋಗಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಜಯಪ್ರಕಾಶ್ @ ಜೆಪಿ, ಎಂಬಾತನನ್ನು ಶಿರಹಳ್ಳಿಯಿಂದ ಬಂಧಿಸಿ ಕರೆ ತಂದಿದ್ದಾರೆ.

ಈತನು ಈ ಅಪಹರಣ ಹಾಗೂ ಸುಲಿಗೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುತ್ತಾನೆ. ಈತನ ವಿರುದ್ಧ ಈ ಹಿಂದೆ 2015 ನೇ ಇಸವಿಯಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ದಿನರಾಜ್ ಎಂಬವರನ್ನು ಕೊಲೆ ನಡೆಸಲು ಯತ್ನಿಸಿದ ಪ್ರಕರಣ ಹಾಗೂ 2016 ನೇ ಇಸವಿಯಲ್ಲಿ ದುರ್ಗೇಶ್ ಎಂಬವರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಸಿ.ಸಿ.ಬಿ ಘಟಕದ ಇನ್ಸಪೆಕ್ಟರ್ ವೆಲೆಂಟೈನ್ ಡಿಸೋಜ, ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

Write A Comment