ಕನ್ನಡ ವಾರ್ತೆಗಳು

‘ಸಾರಾ ಅಬೂಬಕರ್ ಸಾಹಿತ್ಯ ಪ್ರಶಸ್ತಿ’ಗೆ ಭಾಜನರಾದ ಲೇಖಕಿ ಅನುಪಮಾ ಪ್ರಸಾದ್‌

Pinterest LinkedIn Tumblr

st_aganes_abubakr_1

ಮಂಗಳೂರು, ಮಾ.10: ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಹಾಗೂ ಸಂತ ಆ್ಯಗ್ನೆಸ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಅನುಪಮಾ ಪ್ರಸಾದ್‌ರಿಗೆ ‘ಸಾರಾ ಅಬೂಬಕರ್ ಸಾಹಿತ್ಯ ಪ್ರಶಸ್ತಿ’ಯನ್ನು ಡಾ. ಶ್ರೀನಿವಾಸ ಕಕ್ಕಿಲ್ಲಾಯ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಅವರು, ನಮ್ಮನ್ನು ಆಳುತ್ತಿರುವ ಸರಕಾರಗಳು ಸಂವಿಧಾನದ ಮೂಲ ಆಶಯಗಳನ್ನು ಬುಡಮೇಲು ಮಾಡುತ್ತಿವೆ. ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವಲ್ಲಿ ಯುವ ಸಮುದಾಯ ತೊಡಗಿಸಿಕೊಳ್ಳಬೇಕು. ಮೂಲಭೂತವಾದಿ, ಸಂಪ್ರದಾಯವಾದಿ, ಸ್ತ್ರೀವಿರೋಧಿ ಧೋರಣೆಗಳನ್ನು ಪ್ರಶ್ನಿಸಿದಾಗ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು.

st_aganes_abubakr_2 st_aganes_abubakr_3 st_aganes_abubakr_4 st_aganes_abubakr_5 st_aganes_abubakr_6 st_aganes_abubakr_7 st_aganes_abubakr_8

ಹಿರಿಯ ಸಾಹಿತಿ ಸಾರಾ ಅಬೂಬಕರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಯುವ ಲೇಖಕಿ ಯಶಸ್ವಿನಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಂತ ಆ್ಯಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಸಿ. ಸುಪ್ರಿಯಾ ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಜಯಶ್ರೀ ಬಿ. ಕದ್ರಿ ಮಾತನಾಡಿದರು.

ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಡಾ. ಶೈಲಾ ಯು. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸಂಪೂರ್ಣಾನಂದ ಬಳ್ಕೂರು ಸ್ವಾಗತಿಸಿದರು.

Write A Comment