
ಉಡುಪಿ: ಜಿಲ್ಲೆಯಲ್ಲಿ ಮರಳು ಕಲ್ಲು ಗಣಿಗಾರಿಕೆ ಸಂಬಂಧಿಸಿದ ಪರಿಸರ ವಿಮೋಚನ ಅನುಮತಿ ಪತ್ರ ಪಡೆಯಲು ಕೇಂದ್ರ ಸರಕಾರದ ಸುತ್ತೋಲೆಯಂತೆ ಜಿಲ್ಲಾ ಮಟ್ಟದ 2 ಸಮಿತಿ ರಚಿಸಲಾಯಿತು.
ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣವಲ್ಲದ (ನಾನ್ ಸಿಆರ್‌ಝಡ್) ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್), ಪ್ರದೇಶದ ನದಿ ಪಾತ್ರಗಳಲ್ಲಿ ಗುರುತಿಸಿರುವ ಸ್ಯಾಂಡ್ ಬ್ಲಾಕ್‌ಗಳು ಮತ್ತು ಸ್ಯಾಂಡ್ ಬಾರ್‌ಗಳಲ್ಲಿ ಮರಳು ತೆಗೆಯುವ ಬಗ್ಗೆ ಗುರುವಾರ ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್. ಅಧ್ಯಕ್ಷತೆಯಲ್ಲಿ ಸಭೆ ನಡೆದು ಸಮಿತಿ ರಚಿಸಲಾಯಿತು.
ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಪರಿಸರ ಅಘಾತ ಅಂದಾಜೀಕರಣ ಪ್ರಾಧಿಕಾರ ಹಾಗೂ ಸಣ್ಣ ನೀರಾವರಿ ಇಲಾಖೆ ಮುಖ್ಯ ಕಾರ್ಯಪಾಲಕ ಅಭಿಯಂತರರ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಪರಿಣಿತ ಗುಣಮಟ್ಟದ ಸಮಿತಿ ರಚಿಸಲಾಯಿತು.
ಕರಾವಳಿ ನಿಯಂತ್ರಣ ವಲಯವಲ್ಲದ ಮರಳು ಟೆಂಡರ್ ಪ್ರಕ್ರಿಯೆ ಮುಗಿದಿರುವ 4 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಮಾ. 31ರೊಳಗೆ 4 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸಲು ಸೂಚಿಸಿ ಎಪ್ರಿಲ್ ಅಂತ್ಯದೊಳಗೆ ಮತ್ತೆ 5 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶಿಸಿದರು.
ಸಿಆರ್‌ಝಡ್ ವಲಯದಲ್ಲಿ 556,214.562 ಲಕ್ಷ ಮೆಟ್ರಿಕ್ ಟನ್ ಮರಳುಗಾರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈಗ ಮತ್ತೆ ಹೆಚ್ಚುವರಿಯಾಗಿ 1,72682 ಲಕ್ಷ ಮೆಟ್ರಿಕ್ ಟನ್ ಅನುಮೋದನೆಗೆ ಕಳುಹಿಸಿಕೊಡಲಾಗಿದೆ ಎಂದು ಹಿರಿಯ ಭೂ ವಿಜ್ಞಾನಿ ಕೋದಂಡರಾಮಯ್ಯ ಮಾಹಿತಿ ನೀಡಿದರು.