ಕನ್ನಡ ವಾರ್ತೆಗಳು

ಮರಳುಗಾರಿಕೆ ಸ್ಥಗಿತ : ಜಿಲ್ಲಾಧಿಕಾರಿ ಕಚೇರಿ ಮುಂದೆ ತು.ರ.ವೇ ಪ್ರತಿಭಟನೆ.

Pinterest LinkedIn Tumblr

labor_protest_pic_1

ಮಂಗಳೂರು,ಮಾ.21:  ಅಕ್ರಮ ಮರಳು ಸಾಗಾಟ ಹಿನ್ನೆಲೆ ದ.ಕ. ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ತುಳುನಾಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

labor_protest_pic_2 labor_protest_pic_3 labor_protest_pic_4

ಪ್ರಾಕೃತಿಕ ಸಂಪತ್ತು ನಮ್ಮೆಲ್ಲರ ಸೊತ್ತು, ಮರಳು ಸಂಪತ್ತು ಕಟ್ಟಡ ನಿರ್ಮಾಣಕ್ಕೆ ಅತ್ಯಂತ ಉಪಯುಕ್ತ ಹಾಗೂ ಅನಿವಾರ್ಯ ಸಾಧನವಾಗಿದೆ. ಇಲ್ಲಿ ಅತಿ ಹೆಚ್ಚು ಕಟ್ಟಡ ಕಾರ್ಮಿಕರು ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದಾರೆ. ಅದುದರಿಂದ ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಹಲವಾರು ಕಾರ್ಮಿಕರೌ ಕಷ್ಟ ಪಡಬೇಕಾಗಿದೆ ಎಂದು ತುಳುನಾಡು ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ತು.ರ.ವೇ. ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ರಾವ್, ಎಂ.ಸಿರಾಜ್ ಅಡ್ಕರೆ, ಜೈತಿಕಾ ಜೈನ್, ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.

Write A Comment