ಕನ್ನಡ ವಾರ್ತೆಗಳು

ಎಸ್.ಎಸ್.ಎಲ್ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ :ಎ.ಬಿ. ಇಬ್ರಾಹಿಂ

Pinterest LinkedIn Tumblr

dc_meet_1

ಮ೦ಗಳೂರು, ಮಾ.28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪ್ರಚಲಿತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮವಾಗಿ ನಡೆಯುವ ಹಿತದೃಷ್ಟಿಯಿಂದ ಮಾ. 30 ರಿಂದ ಏ.14 ರ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸಲಾಗುವ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಸುತ್ತಳತೆಯಲ್ಲಿ 1973 ರ ದಂಡ ಪ್ರಕ್ರಿಯಾ ಸಂಹಿತೆ ಕಲಂ 144 ರಂತೆ ನಿಷೇದಾಜ್ಞೆಯನ್ನು ಜ್ಯಾರಿಗೊಳಿಸುವುದು ಅಗತ್ಯವೆಂದು ಮನಗಂಡು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎ.ಬಿ. ಇಬ್ರಾಹಿಂ ಇವರು ನಿಷೇದಾಜ್ಞೆಯನ್ನು ಘೋಷಿಸಿದ್ದಾರೆ.

Write A Comment