ಕನ್ನಡ ವಾರ್ತೆಗಳು

ಎ.1ರಿಂದ ನೂತನ ವಿದ್ಯುತ್ ದರ ಜಾರಿಗೆ

Pinterest LinkedIn Tumblr

current

ಬೆಂಗಳೂರು, ಮಾ.29: ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಪರಿಷ್ಕರಣೆ ಮಾಡಿದ್ದು, ಏಪ್ರಿಲ್ 1 ರಿಂದ ನೂತನ ದರ ಜಾರಿಗೆ ಬರಲಿದೆ. ವಿದ್ಯುತ್ ಸರಬರಾಜು ಕಂಪನಿಗಳು ದರ ಹೆಚ್ಚಳದ ಕುರಿತು ಸಲ್ಲಿಸಿದ ಬೇಡಿಕೆಗಳನ್ನು ಆಯೋಗ ಪರಿಗಣಿಸಿದ್ದು, ದರವನ್ನು ಪರಿಷ್ಕರಣೆ ಮಾಡಲಾಗಿದೆ. ಮಾ.30  ಅಥವಾ 31 ರಂದು ದರ ಏರಿಕೆ ಕುರಿತು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್‌ಗೆ 1.2 ರೂ. ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿವೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ 35 ರಿಂದ 50 ಪೈಸೆ ವರೆಗೆ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

2015 ರಲ್ಲಿ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್‌ಗೆ ಕನಿಷ್ಠ 50 ಪೈಸೆ ದರ ಹೆಚ್ಚಳ ಮಾಡಬೇಕೆಂದು ಆಯೋಗಕ್ಕೆ ಮನವಿ ಮಾಡಿದ್ದವು. 2015ರ ಮಾರ್ಚ್‌ನಲ್ಲಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರತಿ ಯೂನಿಟ್‌ಗೆ 13 ರಿಂದ 20ಪೈಸೆ ತನಕ ದರ ಹೆಚ್ಚಳ ಮಾಡಿತ್ತು. ನಂತರ ಹಲವು ಬಾರಿ ವಿದ್ಯುತ್ ಸರಬರಾಜು ಕಂಪನಿಗಳಾಗದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಚೆಸ್ಕಾಂ ಪುನಃ ಆಯೋಗಕ್ಕೆ ದರ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದ್ದವು.

ಈ ಬೇಡಿಕೆಗೆ ಆಯೋಗ ಸ್ಪಂದಿಸಿದ್ದು, ದರ ಹೆಚ್ಚಳ ಮಾಡಲು ಮುಂದಾಗಿವೆ. ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು ದರ ಹೆಚ್ಚಳದ ಕುರಿತು ಸಲ್ಲಿಸಿದ ಬೇಡಿಕೆಗಳನ್ನು ಪರಿಗಣಿಸಿ ವಿದ್ಯುತ್ ದರ ಪರಿಷ್ಕರಣೆಯ ಅಂತಿಮ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುತ್ತದೆ’ ಎಂದು ಆಯೋಗದ ಅಧ್ಯಕ್ಷ ಎಂ.ಕೆ. ಶಂಕರಲಿಂಗೇಗೌಡ ಕೆಲವು ದಿನಗಳ ಹಿಂದೆ ಹೇಳಿದ್ದರು.

Write A Comment