ಉಡುಪಿ: ನಗರಸಭೆಯ 8ನೇ ಅಧ್ಯಕ್ಷರಾಗಿ ಕಾಂಗ್ರೆಸ್ನ ಮೀನಾಕ್ಷಿ ಮಾಧವ ಬನ್ನಂಜೆ ಮತ್ತು ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ನ ಸಂಧ್ಯಾ ಕುಮಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ನಗರ ಸಭಾ ಸಭಾಂಗಣದಲ್ಲಿ ಕುಂದಾಪುರ ಸಹಾಯಕ ಆಯುಕ್ತೆ ಅಶ್ವತಿ ಎಸ್. ಅವರು ಚುನಾವಣಾಧಿಕಾರಿಯಾಗಿ ಪಾಲ್ಗೊಂಡು ಆಯ್ಕೆ ಪ್ರಕ್ರಿಯೆ ನಡೆಸಿದರು. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಮೀಸಲಾತಿ ನಿಗದಿಯಾಗಿತ್ತು.


ನಗರಸಭೆಯಲ್ಲಿ 22 ಮಂದಿ ಕಾಂಗ್ರೆಸ್ ಹಾಗೂ 13 ಮಂದಿ ಬಿಜೆಪಿ ಸದಸ್ಯರಿದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ.
ಕುಡಿಯುವ ನೀರು, ನಗರದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನೂತನ ಅಧ್ಯಕ್ಷೆ ಮೀನಾಕ್ಷಿ ತಿಳಿಸಿದ್ದಾರೆ.