ಬೆಳ್ತಂಗಡಿ,ಮಾ.30 : ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಹಟ್ಟಿಯಲ್ಲಿದ್ದ ಮೂರು ದನ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ವೇಣೂರಿನ ಗರ್ಡಾಡಿಯಲ್ಲಿ ಇಂದು ಮುಂಜಾನೆ ನಡೆದಿದೆ.
ವಸಂತ ಪೂಜಾರಿಯವರ ಮನೆಯ ದನದ ಕೊಟ್ಟಿಗೆಯಲ್ಲಿ ಅವಘಡ ನಡೆದಿದ್ದು, ಬೆಂಕಿ ನಂದಿಸುವ ಪ್ರಯತ್ನ ಮಾಡಿದರೂ ಫಲಕಾರಿಯಾಗಿಲ್ಲ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ
