
ವರದಿ : ಈಶ್ವರ ಎಂ. ಐಲ್/ಚಿತ್ರ : ದಿನೇಶ್ ಕುಲಾಲ್
ಮುಂಬಯಿ: ಅಂಧೇರಿ ಪಶ್ಚಿಮದ ವೀರದೇಸಾಯಿ ರೋಡ್ನ ಶ್ರೀ ಮದ್ಭಾರತ ಮಂಡಳಿ ಮುಂಬಯಿ ಸಂಚಾಲಕತ್ವದ ಶ್ರೀ ಲಕ್ಷ್ಮೀನಾರಾಯಣ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ. 29 ರಂದು ಜರಗಿತು.
ಅಂದು ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಸಸ್ತಿ ಪುಣ್ಯಾಹ ವಾಚನ, ಪ್ರಧಾನ ಹೋಮ, ನವಕ ಕಲಶ ಪೂಜೆ, ಪರಿವಾರ ಸಹಿತ ಶ್ರೀ ಲಕ್ಷ್ಮೀ ನಾರಾಯಣ ದೇವರಿಗೆ ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾ ಪೂಜೆ, ಉತ್ಸವ ಬಲಿ ಇತ್ಯಾದಿಗಳು ನಡೆಯಿತು.

ಪ್ರಧಾನ ಅರ್ಚಕ ಗುರುಪ್ರಸಾದ್ ಭಟ್ ಅವರ ನೇತೃತ್ವತ್ವದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಶ್ರೀ ಮದ್ಭಾರತ ಮಂಡಳಿಯ ಅಧ್ಯಕ್ಷ ಜಗನ್ನಾಥ್ ಪಿ. ಪುತ್ರನ್, ಉಪಾಧ್ಯಕ್ಷರು ಗಳಾದ ರಘುನಾಥ ಬಿ. ಕುಂದರ್ ಮತ್ತು ಸಂಜೀವ ಬಿ. ಚಂದನ್, ಗೌ. ಪ್ರಧಾನ ಕಾರ್ಯದರ್ಶಿ ವಿ. ಕೆ. ಸುವರ್ಣ, ಜತೆ ಕಾರ್ಯದರ್ಶಿಗಳಾದ ಲೋಕನಾಥ್ ಪಿ. ಕಾಂಚನ್ ಮತ್ತು ಹರಿಶ್ಚಂದ್ರ ಸಿ. ಕಾಂಚನ್, ಗೌ. ಪ್ರಧಾನ ಕೋಶಾಧಿಕಾರಿ ಕೇಶವ ಆರ್. ಪುತ್ರನ್, ಗೌರವ ಜತೆ ಕೋಶಾಧಿಕಾರಿಗಳಾದ ನಾರಾಯಣ ಸಿ. ಸುವರ್ಣ ಮತ್ತು ಶ್ಯಾಮ ಕೆ. ಪುತ್ರನ್ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.
ಮೊಗವೀರ ವ್ಯವಸ್ಥಾಪಕ ಮಂಡಳಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ನಗರದ ವಿವಿಧ ಕನ್ನಡ, ಜಾತೀಯಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ತುಳುಕನ್ನಡಿಗರು, ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.