ಕನ್ನಡ ವಾರ್ತೆಗಳು

ಉಪ್ಪಿನಂಗಡಿ ಪೆರ್ನೆ ಬಳಿ ಗ್ಯಾಸ್ ಟ್ಯಾಂಕರ್‌ ಪಲ್ಟಿ : ಗ್ಯಾಸ್‌ ಸೋರಿಕೆ ಹಿನ್ನೆಲೆ – ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ

Pinterest LinkedIn Tumblr

Gas_Tanker_Palty_1

ಮಂಗಳೂರು,ಏ.02:  ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್‌ 75 ಪೆರ್ನೆ ಕಡಂಬಿ ಎಂಬಲ್ಲಿ ಶನಿವಾರ ಬೆಳಿಗ್ಗೆ ಗ್ಯಾಸ್‌ ಟ್ಯಾಂಕರೊಂದು ಪಲ್ಟಿಯಾಗಿದ್ದು, ಮುಗುಚಿಬಿದ್ದ ಗ್ಯಾಸ್ ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆಯಾಗಿರುವ ಹಿನ್ನಲೆಯಲ್ಲಿ ಮಂಗಳೂರು -ಉಪ್ಪಿನಂಗಡಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಹೆಚ್ಚಿನ ಅನಾಹುತ ನಡೆಯದಂತೆ ಸೂಕ್ತ ಕ್ರಮ ತೆಗೆದು ಕೊಂಡಿದ್ದಾರೆ. ಜೊತೆಗೆ ಎಂಆರ್‌ಪಿಎಲ್‌ನ ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಪಲ್ಟಿಯಾದ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಬೆಂಕಿ ಹತ್ತಿಕೊಳ್ಳುವ ಸಂಭವವಿರುವ ಹಿನ್ನಲೆಯಲ್ಲಿ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗವಾಗಿ ಶಾಂತಿನಗರ, ಕರ್ವೇಲು, ದೋರ್ಮೆ, ಮಠಂತಬೆಟ್ಟು, ವಿನಾಯಕ ನಗರ, ಪೆರ್ನೆ, ಸೇಡಿಯಾಪು ರಸ್ತೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದು, ಜೊತೆಗೆ ಗ್ಯಾಸ್‌ ಟ್ಯಾಂಕರ್‌‌ನ್ನು ತೆರವುಗೊಳಿಸುವ ಕಾರ್ಯ ಕೂಡ ಆರಂಭಗೊಂಡಿದೆ.
ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಮತ್ತು ಮಂಗಳೂರು ನಡುವಿಮ ರಸ್ತೆಯಲ್ಲಿ  ವಾಹನಗಳು ಸಾಲುಗಟ್ಟಲೆ ಸರದಿ ಸಾಲಿನಲ್ಲಿ ನಿಂತಿದ್ದು, ಈ ಭಾಗದಲ್ಲಿ ಸ್ಥಗಿತಗೊಂಡಿರುವ ಸಂಚಾರ ವ್ಯವಸ್ಥೆಯನ್ನು ಸರಿಪಡಿಸಿ ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

Write A Comment