ಕನ್ನಡ ವಾರ್ತೆಗಳು

ಪಿಯು ಶಿಕ್ಷಕರ ಮೌಲ್ಯಮಾಪನ ಬಹಿಷ್ಕಾರ ಮುಷ್ಕರಕ್ಕೆ ಪೂರ್ಣ ಬೆಂಬಲ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Pinterest LinkedIn Tumblr

ganesh-karnik-pic

ಮಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವೇತನ ತಾರತಮ್ಯ ಹಾಗೂ ಕಾಲ್ಪನಿಕ ವೇತನ ಸಮಸ್ಯೆಯ ಪರಿಹಾರಕ್ಕಾಗಿ ಕಳೆದ ಮೂರು ವರ್ಷಗಳಲ್ಲಿ ಸರ್ಕಾರವನ್ನು ಅನೇಕ ಬಾರಿ ವಿನಂತಿಸಿಕೊಂಡಿದ್ದರೂ ಸೂಕ್ತ ಸ್ಪಂದನೆ ದೊರೆಯದಿರುವ ಹಿನ್ನಲೆಯಲ್ಲಿ ಅತ್ಯಂತ ನಿರಾಶರಾಗಿ ಬೇರೆ ಯಾವುದೇ ಮಾರ್ಗವಿಲ್ಲದೆ ಮೌಲ್ಯಮಾಪನ ಬಹಿಷ್ಕಾರ ರೂಪದ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆಯನ್ನು ಎದುರಿಸುತ್ತಿದ್ದಾರೆ. 

ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ನ್ಯಾಯೋಚಿತ ಬೇಡಿಕೆಗಳಿಗಾಗಿ ಅವರು ಶಾಂತಿಯುತವಾಗಿ ನಡೆಸುತ್ತಿರುವ ಮುಷ್ಕರಕ್ಕೆ ತನ್ನ ಪೂರ್ಣ ಬೆಂಬಲವಿದೆ ಹಾಗೂ ಶಿಕ್ಷಕರು ಮುಷ್ಕರ ನಡೆಸುತ್ತಾ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಾರೆಂದು ಸಾರ್ವಜನಿಕರನ್ನು ದಿಕ್ಕು ತಪ್ಪಿಸದೆ, ಶಿಕ್ಷಕರನ್ನು ಭಾವನಾತ್ಮಕವಾಗಿ ಶೋಷಿಸದೆ ಅವರ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಕ್ಷಣವೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ವಿ.ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ತಮ್ಮ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Write A Comment