ಕನ್ನಡ ವಾರ್ತೆಗಳು

ಕಾರ್ಮಿಕರ ಬೇಡಿಕೆ ಈಡೇರಿಸಲು ಸಿಐಟಿಯು ಆಗ್ರಹ

Pinterest LinkedIn Tumblr
karmika_protest_pic_1
ಮಂಗಳೂರು, ಎ.18: ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಯ ಅಂಗವಾಗಿ ಮಂಗಳೂರಿನಲ್ಲಿ ಕೂಡ ಇಂದು ಬೆಳಗ್ಗೆ ಸಿಐಟಿಯು ನೇತೃತ್ವದಲ್ಲಿ ಧರಣಿ ನಡೆಯಿತು.
ದ.ಕ. ಜಿಲ್ಲಾಧಿಕಾರಿಗಳ ಕಚೇರಿಯೆದುರು ನಡೆದ ಈ ಪ್ರತಿಭಟನ ಧರಣಿಯಲ್ಲಿ ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ, ಸಿಪಿಎಂ ಮುಖಂಡರಾದ ಸುನೀಲ್‌ಕುಮಾರ್ ಬಜಾಲ್, ಪ್ರೇಮನಾಥ್ ಜಲ್ಲಿಗುಡ್ಡೆ,  ಸದಾಶಿವ, ಪದ್ಮಾವತಿ ಶೆಟ್ಟಿ, ಬಾಬು ದೇವಾಡಿಗ, ಮುಂತಾದವರು ಪಾಲ್ಗೊಂಡಿದ್ದರು.
karmika_protest_pic_2
karmika_protest_pic_3
ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಬಾರಿ ಧರಣಿ ನಡೆಸಿದಾಗ ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆಯುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲು ಎಪ್ರಿಲ್ 11ರಂದು ನಿಗದಿಯಾಗಿದ್ದ ಸಭೆಯನ್ನು ಯಾವುದೇ ಮುನ್ಸೂಚನೆ ನೀಡದೆ ಹಠಾತ್ ರದ್ದುಗೊಳಿಸಲಾಗಿದೆ ಎಂದು ಆರೋಪಿಸಿರುವ ಐಟಿಯು ಮುಖಂಡರು ಈ ಹಿನ್ನೆಲೆಯಲ್ಲಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯವ್ಯಾಪಿ ಮತ್ತೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Write A Comment