ಮಂಗಳೂರು,ಎ.26 ನಗರದಲ್ಲಿ ಕುಡಿಯುವ ನೀರಿನ ಕ್ಷಾಮ ಎದುರಾಗಿರುವುದರಿಂದ ಮ.ನ.ಪಾ ನೀರು ಪೊರೈಕೆ ಮಾಡುತ್ತಿರುವ ತುಂಬೆ ಕಿಂಡಿ ಅಣೆಕಟ್ಟು ಹಾಗೂ ಎಂಆರ್ಪಿಎಲ್ ಅಣೆಕಟ್ಟುಗಳಿಂದ ಕೈಗಾರಿಕೆಗಳಿಗೆ ನೀರು ಪೊರೈಕೆಯನ್ನು ತಕ್ಷಣದಿಂದ ಸ್ಥಗಿತಗೊಳೀಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯದ ನಗರಾಭೃದ್ದಿ ಸಚಿವ ವಿನಯ ಕುಮಾರ್ ಸೊರಕೆ ತಿಳಿಸಿದ್ದಾರೆ.
ಸೋಮವಾರ ಸರ್ಕ್ಯೂಟ್ ಹೌಸ್ ನಲ್ಲಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಜತೆ ನೀರಿನ ಸಮಸ್ಯೆ ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಅವರು ಹೇಳಿಕೆ ನೀಡಿದರು.
ನಗರಕ್ಕೆ 4 ದಿನಗಳಿಗೆ ಸಾಕಾಗುವಷ್ಟು ನೀರು ಶಂಭೂರು ಅಣೆಕಟ್ಟಿನಲ್ಲಿದ್ದು, ಆ ನೀರನ್ನು ತುಂಬೆ ಅಣೆಕಟ್ಟಿಗೆ ಬಿಟ್ಟಿದ್ದೇವೆ. ಶಂಭೂರು ಅಣೆಕಟ್ಟಿನಿಂದ ದಿನನಿತ್ಯ 40 ಎಂಎಲ್ಡಿ ನೀರು ನಿತ್ಯ ಕೈಗಾರಿಕೆಗಳಿಗೆ ಪೂರೈಕೆಯಾಗುತ್ತಿದ್ದು, ಇದೀಗ ನಗರಕ್ಕೆ ನೀರು ಪೂರೈಸಲು ತೀವ್ರ ಸಮಸ್ಯೆ ಎದುರಾಗಿದೆ. ಇದರಿಂದ ಅನಿವಾರ್ಯವಾಗಿ ಕೈಗಾರಿಕೆಗಳಿಗೆ ನೀರು ಪೂರೈಕೆ ಸ್ಥಗಿತಗೊಳಿಸುವ ನಿರ್ಧಾರವನ್ನು ಈ ಸಂಧರ್ಭದಲ್ಲಿ ಕೈಗೊಳ್ಳಲಾಗಿದೆ ಎಂದರು.
ಶಾಸಕ ಜೆ.ಆರ್. ಲೋಬೊ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಹರಿನಾಥ್ ಮೊದಲಾದವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.