
ಮಂಗಳೂರು,ಏ.27; ಇತ್ತೀಚೆಗೆ ನಿಧನ ಹೊಂದಿದ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರಿಗೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ ಕಲ್ಕೂರ, ಸಾಹಿತಿಗಳಾದ ಡಾ| ವಸಂತಕುಮಾರ್ ಪೆರ್ಲ, ಮಹಮ್ಮದ್ ಬಡ್ಡೂರು, ಕೆ.ಎಸ್. ಕಲ್ಲೂರಾಯ, ಲೀಲಾ ಉಪಾಧ್ಯಾಯ, ಸುಧಾಕರರಾವ್ ಪೇಜಾವರ, ಜನಾರ್ದನ ಹಂದೆ, ಭಾರಧ್ವಜ್, ದಯಾನಂದ ಕಟೀಲ್ ಮೊದಲಾದವರು ಪಾಲ್ಗೊಂಡಿದ್ದು ಪುಷ್ಪಾರ್ಚನೆಗೈಯ್ಯುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು..