ಕನ್ನಡ ವಾರ್ತೆಗಳು

ಅಹಿತಾಕರ ಘಟನೆ(ತಲವಾರು ದಾಳಿ) ಹಿನ್ನೆಲೆ :ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿ.

Pinterest LinkedIn Tumblr

Ullala_Police_March_1

ಮಂಗಳೂರು :ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಹಿತಾಕರ ( ತಲವಾರು ದಾಳಿ ಪ್ರಕರಣ) ಘಟನೆಗಳ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 26-04-2016 ಸಾಯಂಕಾಲ 06 ಗಂಟೆಯಿಂದ 7 ದಿನಗಳವರೆಗೆ ಕಲಂ 144 ಸಿ.ಆರ್.ಪಿ.ಸಿ ಅನ್ವಯ ಮಂಗಳೂರು ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ.

ullala_police_march_6 ullala_police_march_8 ullala_police_march_7

ಅದರಂತೆ ಈ ನಿಷೇಧಾಜ್ಞೆ ಸಮಯದಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ಧೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು.ಮೇರವಣಿಗೆ ಮತ್ತು ಸಭೆಗಳನ್ನು ,ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆ ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು , ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು ಕ್ಷಿಪಣಿಗಳನ್ನು ಎಸೆಯುವುದು, ಒಯ್ಯುವುದು ಮತ್ತು ಶೇಖರಿಸಿಡುವುದನ್ನು, ವ್ಯಕ್ತಿಗಳ ಅಥವಾ ಅವರ ಶವಗಳನ್ನು ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರ ಅಥವಾ ಇತರೆಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದು ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾದ ಎಸಗುವುದನ್ನು ಪ್ರೇರೆಪಿಸುವ ಕ್ರಮವನ್ನು ನಿಷೇಧಿಸಲಾಗಿದೆ.

Write A Comment