ಕನ್ನಡ ವಾರ್ತೆಗಳು

ಮಂಗಳೂರಿನಲ್ಲಿ ಶೀಘ್ರದಲ್ಲೇ ರೂ.9 ಕೋಟಿ ವೆಚ್ಚದಲ್ಲಿ 50 ಬೆಡ್‌ಗಳ ಆಯುಷ್ ಆಸ್ಪತ್ರೆ ನಿರ್ಮಾಣ : ಸಚಿವ ಯು.ಟಿ.ಖಾದರ್

Pinterest LinkedIn Tumblr

Ut_kadar_meet_2

ಮಂಗಳೂರು, ಮೆ.2: ದ.ಕ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 50 ಸೆಂಟ್ಸ್ ಜಾಗದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 50 ಬೆಡ್‌ಗಳ ಆಯುಷ್ ಆಸ್ಪತ್ರೆ ನಿರ್ಮಾಣವಾಗಲಿದೆ. ಇದಕ್ಕೆ ಸರಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಮಾಹಿತಿ ನೀಡಿದ್ದಾರೆ.

ಸೋಮವಾರ ನಗರದ ಸರ್ಕ್ಯುಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರ ಶೇ. 60 ಮತ್ತು ರಾಜ್ಯ ಸರಕಾರದ ಶೇ. 40 ಅನುದಾನದಲ್ಲಿ, 9 ಕೋಟಿ ರೂ. ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಲಿದೆ. ಈ ಯೋಜನೆ ಪೂರ್ಣಗೊಂಡರೆ ರಾಜ್ಯದಲ್ಲಿ ಪ್ರಥಮವಾಗಿ ಅಲೋಪತಿ ಮತ್ತು ಆಯುಷ್ ವಿಭಾಗದ ಚಿಕಿತ್ಸಾ ಸೌಲಭ್ಯಗಳು ಒಂದೇ ಕೇಂದ್ರದಲ್ಲಿ ದೊರೆಯಲಿದೆ ಎಂದು ಹೇಳಿದರು.

Ut_kadar_meet_3 Ut_kadar_meet_1

ಮೇ 12ರಂದು ಆಸ್ಪತ್ರೆಯ ಒಪಿಡಿ ಬ್ಲಾಕ್‌ನ್ನು ಆರಂಭಿಸಲಾಗುವುದು. ಈ ಆಸ್ಪತ್ರೆಗಾಗಿ 58 ಹುದ್ದೆಗಳು ರಾಜ್ಯ ಸರಕಾರದಿಂದ ಮಂಜೂರಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ದೇವದಾಸ್, ಕಾಂಗ್ರೆಸ್ ಮುಖಂಡರಾದ ಬಿ.ಎಚ್.ಖಾದರ್, ಫಾರೂಕ್ ತುಂಬೆ, ಆಯುಷ್ ಇಲಾಖೆಯ ವಿಶೇಷ ಅಧಿಕಾರಿ ಡಾ.ಇಕ್ಬಾಲ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Write A Comment