ಕನ್ನಡ ವಾರ್ತೆಗಳು

ಉಳ್ಳಾಲ ಕೊಲೆ ಯತ್ನ ಹಾಗೂ ಕೊಲೆ ಪ್ರಕರಣ : ಸಿಸಿಬಿಯಿಂದ ಮತ್ತೆ ಐವರ ಬಂಧನ

Pinterest LinkedIn Tumblr

ಮಂಗಳೂರು, ಮೇ.12: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಕೊಲೆ ಯತ್ನ ಹಾಗೂ ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ಐವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಸುರತ್ಕಲ್ ಪರಿಸರದಿಂದ ಬಂಧಿಸಿದ್ದಾರೆ.

ಉಳ್ಳಾಲ ಮೊಗವೀರ ಪಟ್ಣ ನಿವಾಸಿಗಳಾದ ಶಿವನ್ (22), ರಮೀತ್ (23), ಸವನ್ (23), ಶ್ರವಣ್ (22), ತುಷಾರ್ (22) ಬಂಧಿತ ಆರೋಪಿಗಳಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದು, ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೇರಿದೆ. ಏ.14 ಮತ್ತು 25ರ ಈ ಎರಡು ಪ್ರಕರಣಗಳನ್ನು ಭಾಗಿಯಾಗಿದ್ದ ಆರೋಪಿಗಳ ಮಾಹಿತಿಯನ್ನು ಪಡೆದುಕೊಂಡ ಸಿಸಿಬಿ ಪೊಲೀಸರು ಆರೋಪಿಗಳು ಸುರತ್ಕಲ್ ಪರಿಸರದಲ್ಲಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬಂಧನ ನಡೆದಿದೆ.

Write A Comment