
ಮಂಗಳೂರು: ಕರಾವಳಿಯ ಜೀವನದಿ ನೇತ್ರಾವತಿಯ ಉಳಿವಿಗಾಗಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಜಾತಿ, ಮತ ಪಕ್ಷ ಬೇಧವಿಲ್ಲದೆ ಸರ್ವ ಧರ್ಮೀಯರು ಒಂದಾಗಿ ಮೇ 19 ಹಮ್ಮಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ದ.ಕ.ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ಸ್ವಾಮೀಜಿಗಳು ಸೇರಿದಂತೆ ಎಲ್ಲಾ ಧರ್ಮದ ಧಾರ್ಮಿಕ ಮುಖಂಡರು ಯೋಜನೆ ವಿರೋಧಿಸಿ ಬೆಂಬಲ ವ್ಯಕ್ತಪಡಿಸಿದ್ದಲ್ಲದೆ ಜನತೆ ಸ್ವಯಂ ಪ್ರೇರಿತರಾಗಿ ಪಾಳ್ಗೊಳ್ಳುವಂತೆ ಕರೆ ನೀಡಿರುವುದು ಆಶಾದಾಯಕ ಬೆಳವಣಿಗೆ.ಕರಾವಳಿಯನ್ನು ಬರಡಾಗಿಸುವ ಈ ಯೋಜನೆಯನ್ನು ಸರಕಾರ ತಕ್ಷಣ ಸ್ಥಗಿತಗೊಳಿಸಬೇಕು. ಮೇ19 ರ ಜಿಲ್ಲಾ ಬಂದ್ ನಲ್ಲಿ ಜನತೆ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಬೇಕು ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
Comments are closed.