
ಕಾಸರಗೋಡು,ಮೇ.18: ಮಂಜೇಶ್ವರ ಹೊಸಂಗಡಿ ರಾಷ್ಟ್ರೀಯ ಹೆದ್ದಾರಿಯ ಬಳಿ ಕೆ ಎಸ್ ಆರ್ ಟಿ ಸಿ ಬಸ್ಸು ಓಮ್ನಿವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರಿಗೆ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮ್ರತಪಟ್ಟ ವ್ಯಕ್ತಿಯನ್ನು ಓಮ್ನಿ ಚಾಲಕ ಉಪ್ಪಳ ಹಿದಾಯತ್ ನಗರದ ಅಬ್ದುಲ್ ಅಜೀಜ್ (55) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡವರು ಉಪ್ಪಳ ನಿವಾಸಿಗಳಾಗಿದ್ದು , ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ:
ಕಾಸರಗೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ತಲಪಾಡಿ ಕಡೆಯಿಂದ ಉಪ್ಪಳಕ್ಕೆ ಬರುತ್ತಿದ್ದ ಓಮ್ನಿ ವ್ಯಾನ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಿಂದ ನಜ್ಜುಗುಜ್ಜಾದ ವ್ಯಾನ್ ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ಹರ ಸಾಹಸಪಟ್ಟು ಹೊರತೆಗೆದು ಆಸ್ಪತ್ರೆಗೆ ತಲುಪಿಸಿದರು.
ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ
Comments are closed.