
SP Bhushan Gulabrao Borase
ಮಂಗಳೂರು, ಮೇ 21: ಪೊಲೀಸ್ ಇಲಾಖೆಗೆ ಸರ್ಜರಿ ಮಾಡಿರುವ ಸರಕಾರ 18ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ.
ಪಶ್ಚಿಮ ವಲಯ ಐಜಿಪಿಯಾಗಿ ಜೆ.ಅರುಣ್ ಚಕ್ರವರ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿ (SP) ಯಾಗಿ ಐಪಿಎಸ್ ಅಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಡಾ.ಎಸ್.ಡಿ.ಶರಣಪ್ಪ ಅವರನ್ನು ಬೆಂಗಳೂರು ನಗರ ದಕ್ಷಿಣ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ಪದೋನ್ನತಿ ನೀಡಲಾಗಿದೆ.
ಭೂಷಣ್ ಗುಲಾಬ್ ರಾವ್ ಬೊರಸೆ ಅವರು ಬೆಂಗಳೂರು ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಮಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.
ಪಶ್ಚಿಮ ವಲಯ ಐಜಿಪಿಯಾಗಿದ್ದ ಅಮೃತ್‌ಪಾಲ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
Comments are closed.