ಕನ್ನಡ ವಾರ್ತೆಗಳು

ಮಂಗಳೂರಿನ ಇಬ್ಬರ ಮೇಲೆ ಗೂಂಡಾ ಕಾಯ್ದೆ : ಆರೋಪಿಗಳು ಮೈಸೂರು ಕೇಂದ್ರ ಕಾರಾಗೃಹಕ್ಕೆ ರವಾನೆ

Pinterest LinkedIn Tumblr

arrested

ಮಂಗಳೂರು, ಮೇ. 22: ಗೂಂಡಾ ಕಾಯ್ದೆಯಡಿ ಇಬ್ಬರು ವ್ಯಕ್ತಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉಳ್ಳಾಲದ ಮೊಗವೀರಪಟ್ಣ ನಿವಾಸಿ ರಾಹುಲ್ ಪೂಜಾರಿ (22) ಮತ್ತು ಕಾವೂರು ಶಾಂತಿನಗರದ ಮೊಹಮ್ಮದ್ ಇಕ್ಬಾಲ್ (37) ಎಂದು ಗುರುತಿಸಲಾಗಿದೆ.

ರಾಹುಲ್ ವಿರುದ್ಧ 2014ರಿಂದ ಉಳ್ಳಾಲ ಪೊಲಿಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ ದೊಂಬಿ, ಕೊಲೆಗೆ ಯತ್ನ ಮತ್ತು ಕೊಲೆ ಪ್ರಕರಣಗಳು ಸೇರಿವೆ. ಈತನನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಮೊಹಮ್ಮದ್ ಇಕ್ಬಾಲ್ ವಿರುದ್ದ 2009 ರಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ, ಬಜ್ಪೆ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ ಮತ್ತು ಕಾವೂರು ಪೊಲೀಸ್ ಠಾಣೆಯ ಪ್ರಕರಣಗಳು ದಾಖಲಾಗಿದ್ದು ಇವುಗಳಲ್ಲಿ ಕೊಲೆ, ಸುಲಿಗೆ, ಸೊತ್ತುಹಾನಿ ಮತ್ತು ದರೋಡೆಗೆ ಯತ್ನ ಪ್ರಕರಣಗಳು ಸೇರಿರುತ್ತವೆ. ಈತನನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಿ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಜೈಲಿಗೆ ಕಳುಹಿಸಲಾಗಿದೆ.

ಸ್ಥಳಿಯ ಪೊಲೀಸ್ ನಿರೀಕ್ಷಕರು, ಸಂಬಂಧಪಟ್ಟ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಉಪ ಪೊಲೀಸ್ ಆಯುಕ್ತರು ಕಾನೂನು ಮತ್ತು ಸುವ್ಯವಸ್ಥೆ ಮಂಗಳೂರು ನಗರ ಇವರುಗಳ ವರದಿಯ ಆಧಾರದ ಮೇರೆಗೆ ಪೊಲೀಸ್ ಆಯುಕ್ತರು ಮಂಗಳೂರು ನಗರ ಇವರು ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದ ಆಜ್ಞೆಯನ್ನು ಹೊರಡಿಸಿರುತ್ತಾರೆ.

Comments are closed.