ಕನ್ನಡ ವಾರ್ತೆಗಳು

ಕೊಲ್ಯ ಮಠದ ರಮಾನಂದ ಸ್ವಾಮೀಜಿ ದೈವಧೀನ

Pinterest LinkedIn Tumblr

kolya_ramanda_swamji

ಮಂಗಳೂರು,ಮೇ.23: ಕೊಲ್ಯದ ಶ್ರೀ ಶ್ರೀ ಶ್ರೀ ರಮಾನಂದ ಸ್ವಾಮೀಜಿ (67) ಅವರು ಇಂದು ದೈವಧೀನರಾಗಿದ್ದು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಅಸ್ಪತ್ರೆಯಲ್ಲೇ ನಿಧನ ಹೊಂದಿದರು.

ಸ್ವಾಮೀಜಿಯವರ ಅಗಲುವಿಕೆಯಿಂದ ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ನಿರ್ಗತಿಕರಿಗೆ ಸಹಾಯ ಹಸ್ತವನ್ನು ಮಾಡಿದ್ದಾರೆ. ಹಿಂದೂ ಸಮಾಜದ ಹಾಗೂ ಧೀನದಲಿತರ ಅಭಿವೃದ್ಧಿಗೆ ಶ್ರಮಿಸಿ, ರಾಮ ಮಂದಿರ ಮತ್ತು ಗೋಹತ್ಯಾ ನಿಷೇಧ ಚಳುವಳಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಬಿಜೆಪಿ ವತಿಯಿಂದ ಸಂತಾಪ :

ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಸ್ವಾಮೀಜಿಯವರ ಅಂತಿಮ ದರ್ಶನ ಮಾಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವರಾದ ಕೃಷ್ಣ ಪಾಲೆಮಾರ್, ನಾಗರಾಜ್ ಶೆಟ್ಟಿ, ವಿ.ಪ.ಸದಸ್ಯರಾದ ಕ್ಯಾ.ಗಣೇಶ್ ಕಾರ್ಣಿಕ್, ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಶಾಸಕರಾದ ಯೋಗೀಶ್ ಭಟ್, ಪದ್ಮನಾಭ ಕೊಟ್ಟಾರಿ, ಜಯರಾಮ್ ಶೆಟ್ಟಿ, ರುಕ್ಮಯ್ಯ ಪೂಜಾರಿ, ಮೋನಪ್ಪ ಭಂಡಾರಿ, ಮುಂತಾದವರು ಸಂತಾಪ ಸೂಚಿಸಿದ್ದಾರೆ.

ಸ್ವಾಮೀಜಿಯವರ ನಿಧನಕ್ಕೆ ಕಲ್ಕೂರ ಸಂತಾಪ

ಇಂದು ‌ಅಸ್ತಂಗತರಾದ ಕೊಲ್ಯ ರಮಾನಂದಾಶ್ರಮದ ಪೂಜ್ಯ ಶ್ರೀ ರಮಾನಂದ ಸ್ವಾಮೀಜಿಯವರ ನಿಧನಕ್ಕೆದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ‌ ಅಧ್ಯಕ್ಷ‌ ಎಸ್. ಪ್ರದೀಪ ಕುಮಾರ ಕಲ್ಕೂರ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ. ಬ್ರಾಹ್ಮಣ‌ ಒಕ್ಕೂಟದ ವತಿಯಿಂದಲೂ ಸಂತಾಪ ವ್ಯಕ್ತಪಡಿಸಿದ್ದಾರೆ.

Comments are closed.