ಕನ್ನಡ ವಾರ್ತೆಗಳು

ಎತ್ತಿನಹೊಳೆ ಯೋಜನೆ : ಸರ್ವ ಪಕ್ಷದ ವತಿಯಿಂದ ಮುಖ್ಯಮಂತ್ರಿ ಜೊತೆ ಚರ್ಚೆಗೆ ಸಕಲ ಸಿದ್ದತೆ.

Pinterest LinkedIn Tumblr

Netrvathi_press_meet_1

ಮಂಗಳೂರು, ಮೇ 23: ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯು ಸರ್ವ ಪಕ್ಷ ನಿಯೋಗದ ಸಹಕಾರದೊಂದಿಗೆ ಶೀಘ್ರದಲ್ಲೇ ಎತ್ತಿನಹೊಳೆ ಯೋಜನೆಯ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವ ಉದ್ದೇಶದಿಂದ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಯೋಜನೆ ಕುರಿತು ಹೋರಾಟಗಾರರೊಂದಿಗೆ ಸಭೆ ನಡೆಸಲು ಒತ್ತಡ ಹಾಕಲಾಗುವುದು ಎಂದು ಸಮಿತಿ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯೋಜನೆಗೆ ಸಂಭಂಧಿಸಿ ಈಗಾಗಲೇ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದು,ಇದರ ಬಗ್ಗೆ ಸಭೆಯಲ್ಲಿ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದ್ದರು, ಆದರೆ ಈವರೆಗೂ ಸಭೆ ಕರೆದು ಚರ್ಚಿಸಿಲ್ಲ . ಅದ್ದರಿಂದ ನಮ್ಮ ಹೋರಾಟವನ್ನು ಬೆಂಗಳೂರಿಗೆ ಕೊಂಡೊಯ್ಯುವುದಾಗಿ ಅವರು ಈ ಸಂಧರ್ಭದಲ್ಲಿ ಹೇಳಿದರು.

Netrvathi_press_meet_2 Netrvathi_press_meet_3

ಹೋರಾಟಗಾರ ಎಂ.ಜಿ.ಹೆಗಡೆ ಮಾತನಾಡಿ, ವಿಧಾನಸಭೆಯಲ್ಲಿ ಮಂಜೂರುಗೊಂಡ ಕೆಲವು ಯೋಜನೆಗಳು ಜಾರಿಗೆ ಬಂದಿಲ್ಲ. ಎತ್ತಿನಹೊಳೆ ಯೋಜನೆ ಮಾತ್ರ ಆಗಲೇ ಬೇಕೆಂಬ ಹಠ ಖಾದರ್ ಅವರಿಗೆ ಯಾಕೆ? ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆಯನ್ನು ಖಾದರ್ ನೀಡುತ್ತಿದ್ದಾರೆ. ಪದೇ ಪದೇ ಯೋಜನೆಯನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳುವ ಖಾದರ್ ಗೆ ಯೋಜನೆಯ ಕುರಿತು ಯಾಕೆ ಆಸಕ್ತಿ ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸಂಚಾಲಕರಾದ ಯೋಗೀಶ್ ಶೆಟ್ಟಿ ಜೆಪ್ಪು, ಶಶಿಧರ್ ಶೆಟ್ಟಿ ಕೊಳಂಬೆಮ್ ದಿನಕರ್ ಶೆಟ್ಟಿ, ಅನಂದ ಶೆಟ್ಟಿ ಅಡ್ಯಾರ್, ಮಾಜಿ ಉಪಮೇಯರ್ ಪುರುಷೋತ್ತಮ ಚಿತ್ರಾಪುರ,ನಾಗರಾಜ್, ಪ್ರಶಾಂತ್ ರಾವ್ ಕಡಬ, ಮೊದಲಾದವರು ಉಪಸ್ಥಿತರಿದ್ದರು.

Comments are closed.