ಗಲ್ಫ್

ಮಾ.20ರಂದು ಶಾರ್ಜಾ ಯೂನಿವರ್ಸಿಟಿ ಸ್ಟೇಡಿಯಂನಲ್ಲಿ ಇಂಡಿಯನ್ ಕಲ್ಚರಲ್ ಸೊಸೈಟಿಯ ವಾರ್ಷಿಕ ಕ್ರೀಡಾಕೂಟ

Pinterest LinkedIn Tumblr

5

ದುಬೈ, ಮಾ.17: ಅನಿವಾಸಿ ಭಾರತೀಯರ ನಡುವೆ ಸಾಮಾಜಿಕ ಸೇವಾ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಇಂಡಿಯನ್ ಕಲ್ಚರಲ್ ಸೊಸೈಟಿಯು ತನ್ನ ವಾರ್ಷಿಕ ಕ್ರೀಡಾಕೂಟವನ್ನು ಮಾ.20ರ ಶುಕ್ರವಾರದಂದು ಶಾರ್ಜಾ ಯೂನಿವರ್ಸಿಟಿ ಸ್ಟೇಡಿಯಂನಲ್ಲಿ ಆಯೋಜಿಸಿದೆ.

ಇಂಡಿಯನ್ ಕಲ್ಚರಲ್ ಸೊಸೈಟಿ ಕರ್ನಾಟಕ ವಿಭಾಗದ ಅಧ್ಯಕ್ಷ ನಸೀರ್ ಕರಾಜೆ ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಿಗಳ, ತಂಡಗಳ ಹೆಸರು ಹಾಗೂ ಜರ್ಸಿ(ವಿವಿಧ ತಂಡಗಳ ಸಮವಸ್ತ್ರ)ಯನ್ನು ಮಂಗಳವಾರ ರಾತ್ರಿ ನಡೆಯುವ ಸರಳ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ.

ಬೆಳಗ್ಗೆ 8ರಿಂದ ಆರಂಭಗೊಳ್ಳಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಇಂಡಿಯನ್ ಕಲ್ಚರಲ್ ಸೊಸೈಟಿ ಕೇರಳ ವಿಭಾಗದ ಅಧ್ಯಕ್ಷ ಸಾದುಲ್ಹ್ ನೆರವೇರಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾರ್ಜಾ ಯೂನಿವರ್ಸಿಟಿಯ ವೈಸ್‌ಚಾನ್ಸಲರ್ ಮಜೀದ್ ಅಲ್ ಜರ್ವಾನ್, ಇಂಡಿಯನ್ ಕಲ್ಚರಲ್ ಸೊಸೈಟಿ ಯುಎಇಯ ಅಧ್ಯಕ್ಷ ಹಸನ್ ಟಿ.ಎಂ. ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟ ಹಾಗೂ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದ್ದು, ಈ ಕ್ರೀಡಾಕೂಟದಲ್ಲಿ ಯುಎಇಯಲ್ಲಿರುವ ಎಲ್ಲ ಅನಿವಾಸಿ ಭಾರತೀಯರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Write A Comment