ದುಬೈಯ ಝಬೀಲ್ ಪಾರ್ಕ್’ನಲ್ಲಿ ಬಿಲ್ಲವ ಫ್ಯಾಮಿಲಿ ಪಿಕ್ನಿಕ್’ನ್ನು ಆಯೋಜಿಸಲಾಗಿತ್ತು. ಬೆಳಗ್ಗೆಯಿಂದ ಸಂಜೆಯವರೆಗೆ ನಡೆದ ಪಿಕ್ನಿಕ್ ವೇಳೆ ಭಾಗವಹಿಸಿದ್ದವರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸತೀಶ್ ಪೂಜಾರಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಲವಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಿ ಅಭಿನಂದಿಸಲಾಯಿತು.