ಗಲ್ಫ್

ಯುಎಇಗೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿಯ ಸ್ವಾಗತ ಕೋರಿದ ಅಬುಧಾಬಿ ಯುವರಾಜ

Pinterest LinkedIn Tumblr

ಭಾರತದ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂಜೆ ಅಬುಧಾಬಿಗೆ ಆಗಮಿಸಿದ್ದು, ಅವರಿಗೆ ಅದ್ದೂರಿಯ ಸ್ವಾಗತ ನೀಡಲಾಯಿತು.

ಪ್ರಧಾನಿ ನರೇಂದ್ರ ಮೋದಿ ಇದು ಎರಡನೇ ಬಾರಿಗೆ ಯುಎಇಗೆ ಆಗಮಿಸಿದ್ದು, ರವಿವಾರ ಅಬುಧಾಬಿಯಲ್ಲಿ ನೂತನ ದೇಗುಲಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

 

 

ಶನಿವಾರ ಅಬುಧಾಬಿಗೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಝಯೆದ್ ಅಲ್ ನಹ್ಯಾನ್ ಆತ್ಮೀಯವಾಗಿ ಬರಮಾಡಿಕೊಂಡರು.

ಅಬುಧಾಬಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ಹಿಂದೂ ದೇವಾಲಯ ಇದಾಗಿದೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಐತಿಹಾಸಿಕ ಆಗಿದೆ.

ದುಬೈ ಒಪೇರಾ ಹೌಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ. ಎಲ್ಲ ಪ್ರಮುಖ ಸಂಘಟನೆಗಳ ಪ್ರತಿನಿಧಿಗಳು ಮತ್ತು ಪ್ರಮುಖ ಭಾರತೀಯರನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮವು ಐತಿಹಾಸಿಕವಾಗಿರುತ್ತದೆ. ಯಾಕೆಂದರೆ ಈ ಸಂದರ್ಭದಲ್ಲಿ ಅಬುಧಾಬಿಯ ಮೊದಲ ಹಿಂದೂ ದೇವಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತದೆ.

Comments are closed.